ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಂದಾಯ ಇಲಾಖೆಗೆ ಬಹುಮಾನ
ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಂದಾಯ ಇಲಾಖೆಯ ಕ್ರೀಡಾಕೂಟದಲ್ಲಿ ಭದ್ರಾವತಿ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಭದ್ರಾವತಿ: ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಂದಾಯ ಇಲಾಖೆಯ ಕ್ರೀಡಾಕೂಟದಲ್ಲಿ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಮಹಿಳೆಯರ ಕ್ರಿಕೆಟ್ ತಂಡ ಪ್ರಥಮ ಹಾಗೂ ಕಬಡ್ಡಿ ದ್ವಿತೀಯ ಸ್ಥಾನ ಮತ್ತು ಪುರುಷರ ತಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ತಾಲೂಕು ದಂಡಾಧಿಕಾರಿ ಪರುಸಪ್ಪ ಕುರುಬರ ಅವರ ಮಾರ್ಗದರ್ಶನದೊಂದಿಗೆ ಪ್ರತಿ ದಿನ ಸಾಕಷ್ಟು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡರವರ ನೇತೃತ್ವದಲ್ಲಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ತರಬೇತಿ ನೀಡಲಾಗಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯದರ್ಶಿ ಎಸ್.ಕೆ ಮೋಹನ್, ಖ...