ಸುಮಾರು ೧ ವರ್ಷದಿಂದ ತಾಲೂಕು ದಂಡಾಧಿಕಾರಿ ಕರ್ತವ್ಯ ನಿರ್ವಹಿಸಿ ಗುರುವಾರ ಸೇವೆಯಿಂದ ನಿವೃತ್ತಿ ಹೊಂದಿದ ತಹಸೀಲ್ದಾರ್ ಸೋಮಶೇಖರ್‌ಗೆ ಭದ್ರಾವತಿ ತಾಲೂಕು ಆಡಳಿತದಿಂದ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ: ಸುಮಾರು ೧ ವರ್ಷದಿಂದ ತಾಲೂಕು ದಂಡಾಧಿಕಾರಿ ಕರ್ತವ್ಯ ನಿರ್ವಹಿಸಿ ಗುರುವಾರ ಸೇವೆಯಿಂದ ನಿವೃತ್ತಿ ಹೊಂದಿದ ತಹಸೀಲ್ದಾರ್ ಸೋಮಶೇಖರ್‌ಗೆ ತಾಲೂಕು ಆಡಳಿತದಿಂದ ಬೀಳ್ಕೊಡುಗೆ ನೀಡಲಾಯಿತು.ನಗರಸಭೆ ಸಭಾಂಗಣದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ತಹಸೀಲ್ದಾರ್ ಸೇವೆಯನ್ನು ಪ್ರಶಂಸಿದರು. ತಾಲೂಕು ಕಛೇರಿ ಸಿಬ್ಬಂದಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ನಗರಸಭೆ ಪೌರಾಯುಕ್ತ ಮನೋಹರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ