ಭದ್ರಾವತಿಯಲ್ಲಿ ಪ್ರತಿದಿನ ಮಧ್ಯಾಹ್ನ ಕಡುಬಡವರಿಗೆ ಆಹಾರ ಪೂರೈಕೆ ಮಾಡುತ್ತಿರುವ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ಕೆ ಸಹಕರಿಸಿದರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು.
ಭದ್ರಾವತಿ: ಕೊರೋನಾ ವೈರಸ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಪ್ರತಿ ದಿನ ಮಧ್ಯಾಹ್ನ ಆಹಾರ ತಯಾರಿಸಿ ಪೂರೈಕೆ ಮಾಡುತ್ತಿರುವ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ ಭಾನುವಾರ ಸಹ ಸೇವಾ ಕಾರ್ಯ ಕೈಗೊಂಡಿತು.ಲಾಕ್‌ಡೌನ್ ಆರಂಭಗೊಂಡಾಗಿನಿಂದಲೂ ಸಂಘದ ವತಿಯಿಂದ ಪ್ರತಿದಿನ ಮಧ್ಯಾಹ್ನ ಸುಮಾರು ೧೨೦ ಮಂದಿಗೆ ಸಾಕಾಗುವಷ್ಟು ಆಹಾರ ತಯಾರಿಸಿ ವಿತರಿಸಲಾಗುತ್ತಿದ್ದು, ಹಳೇನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ಶಾರದ ಭಜನಾ ಮಂಡಳಿ ಒಂದು ದಿನದ ಆಹಾರ ತಯಾರಿಕೆ ಕೈಜೋಡಿಸಿ ಸಂಘದ ಕಾರ್ಯಕ್ಕೆ ಸಹಕರಿಸಿದೆ.
ಸಂಘದ ವತಿಯಿಂದ ಇದುವರೆಗೂ ಅಡುಗೆ ತಯಾರಿಕೆಗೆ ಸಹಕರಿಸಿದ ಅಡುಗೆ ತಯಾರಕರಾದ ಕುಮಾರ್ ಮತ್ತು ಕೃಷ್ಣ ಭಟ್ ಹಾಗೂ ಶ್ರೀ ಶಾರದ ಭಜನಾ ಮಂಡಳಿಯವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ವಿಲ್ಸನ್ ಬಾಬು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಅರಳಿಕಟ್ಟೆ ಯುವಕರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
No comments:
Post a Comment