ಭದ್ರಾವತಿ ಕಾಗದನಗರ ಉಜ್ಜನಿಪುರದ ಕೂಲಿ ಕಾರ್ಮಿಕರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ದಿವಂಗತ ದೊರೆಸ್ವಾಮಿಯವರ ಸ್ಮರಣಾರ್ಥ ದಿನಸಿ ಸಾಮಗ್ರಿ ವಿತರಿಸಲಾಯಿತು.
ಭದ್ರಾವತಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ದಿವಂಗತ ದೊರೆಸ್ವಾಮಿಯವರ ಸ್ಮರಣಾರ್ಥ ಸಂಕಷ್ಟಕ್ಕೆ ಒಳಗಾಗಿರುವ ಕೂಲಿ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.ನಗರಸಭೆ ವ್ಯಾಪ್ತಿಯ ಕಾಗದನಗರ ಉಜ್ಜನಿಪುರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಿರುವ ಪರಿಣಾಮ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಮನಗಂಡಿರುವ ದಿವಗಂತ ದೊರೆಸ್ವಾಮಿ ಕುಟುಂಬದವರಾದ ಕಾವ್ಯ ಮತ್ತು ಅನುಪ್ ಚುಂಚಾದ್ರಿ ಮಹಿಳಾ ವೇದಿಕೆ ಸಹಯೋಗದೊಂದಿಗೆ ದಿನಸಿ ಸಾಮಗ್ರಿ ಹಾಗೂ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರು.
ಚುಂಜಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆ ಅಧ್ಯಕ್ಷೆ ಪ್ರಭಾರಾಜು, ಉಪಾಧ್ಯಕ್ಷೆ ಎಂ.ಎಸ್ ಸುಧಾಮಣಿ, ಕುಂಚ ಕಲಾವಿದ ಬಿ. ಗುರು, ಪೀಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ವತಿಯಿಂದ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನ್ಯೂಟೌನ್ ಲಯನ್ಸ್‌ಕ್ಲಬ್‌ನಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಂಚ ಕಲಾವಿದರು, ಗ್ಯಾರೇಜ್ ಕೆಲಸಗಾರರು, ಆಟೋ ಚಾಲಕರು ಸೇರಿದಂತೆ ಇನ್ನಿತರರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ಬಡ ಮಹಿಳೆಯರು-ಕುಂಚ ಕಲಾವಿದರಿಗೆ ದಿನಸಿ ಸಾಮಗ್ರಿ: ಚುಂಜಾದ್ರಿ ಮಹಿಳಾ ವೇದಿಕೆ ವತಿಯಿಂದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್‌ರವರ ಸಹಕಾರದೊಂದಿಗೆ ಭಾನುವಾರ ನ್ಯೂಟೌನ್ ಸಂತೆ ಮೈದಾನದ ಬಳಿ ಸುಮಾರು ೨೦೦ ಮಂದಿ ಬಡ ಮಹಿಳೆಯರು ಹಾಗೂ ಕುಂಚ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ಇದೆ ರೀತಿ ನಗರಸಭೆ ವತಿಯಿಂದ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನ್ಯೂಟೌನ್ ಲಯನ್ಸ್‌ಕ್ಲಬ್‌ನಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಂಚ ಕಲಾವಿದರು, ಗ್ಯಾರೇಜ್ ಕೆಲಸಗಾರರು, ಆಟೋ ಚಾಲಕರು ಸೇರಿದಂತೆ ಇನ್ನಿತರರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ನಗರಸಭೆ ಪೌರಾಯುಕ್ತ ಮನೋಹರ್, ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರಪ್ಪ, ಕಾರ್ಯದರ್ಶಿ ಕಾರ್ತಿಕ್, ಖಜಾಂಚಿ ನಾಗರಾಜ್ ಶೇಟ್, ಮಾಜಿ ಜಿಲ್ಲಾ ಗೌರ್‍ನರ್ ಬಿ. ದಿವಾಕರ ಶೆಟ್ಟಿ, ವಲಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್, ಕೆ.ಸಿ ವೀರಭದ್ರಪ್ಪ, ವೆಂಕಟರಮಣ ಶೇಟ್, ಎಚ್.ವಿ ಶಿವರುದ್ರಪ್ಪ, ಎಂ.ಎಸ್ ಜನಾರ್ಧನ ಅಯ್ಯಂಗಾರ್, ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚುಂಜಾದ್ರಿ ಮಹಿಳಾ ವೇದಿಕೆ ವತಿಯಿಂದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್‌ರವರ ಸಹಕಾರದೊಂದಿಗೆ ಭಾನುವಾರ ಭದ್ರಾವತಿ ನ್ಯೂಟೌನ್ ಸಂತೆ ಮೈದಾನದ ಬಳಿ ಸುಮಾರು ೨೦೦ ಮಂದಿ ಬಡ ಮಹಿಳೆಯರು ಹಾಗೂ ಕುಂಚ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
೧೦೦ ಮಂದಿ ಆಟೋ ಚಾಲಕರಿಗೆ ದಿನಸಿ ಸಾಮಗ್ರಿ ವಿತರಣೆ: ಪೊಲೀಸ್ ಉಮೇಶ್ ನೇತೃತ್ವದ ಸ್ನೇಹಿ ಜೀವಿ ಬಳಗದ ವತಿಯಿಂದ ಭಾನುವಾರ ಜನ್ನಾಪುರ ಅಂತರಘಟ್ಟಮ್ಮ ದೇವಸ್ಥಾನದ ಬಳಿ ಸುಮಾರು ೧೦೦ ಮಂದಿ ಬಡ ಆಟೋ ಚಾಲಕರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ಸ್ನೇಹ ಜೀವಿ ಬಳಗದ ಸತೀಶ್‌ಗೌಡ, ನಗರಸಭೆ ಮಾಜಿ ಸದಸ್ಯ ಕೃಷ್ಣಪ್ಪ, ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಅಂತೋಣಿ ವಿಲ್ಸನ್, ರಮೇಶ್, ಲೋಹಿತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment