ಕಡು ಬಡವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪ
ಭದ್ರಾವತಿಯಲ್ಲಿ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಆಲೆಮನೆ ಮಾಲೀಕರ ಸಹಕಾರದೊಂದಿಗೆ ಕಡು ಬಡವರಿಗೆ ದಿನಸಿ ಸಾಮಗ್ರಿ ವಿತರಿಸಿದರು.
ಭದ್ರಾವತಿ: ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳು ಬಡವರಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.ಅವರು ಶನಿವಾರ ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗದ ಕಡು ಬಡವರಿಗೆ ದಿನಸಿ ಪದಾರ್ಥಗಳನ್ನು ವಿತರಿಸಿ ಮಾತನಾಡಿದರು.
ಉಚಿತ ಹಾಲು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪದಾರ್ಥ ವಿತರಣೆ ಸೇರಿದಂತೆ ಬಡವರಿಗಾಗಿ ಸರ್ಕಾರ ರೂಪಿಸಿರುವ ಯಾವುದೇ ಯೋಜನೆ ಬಡವರಿಗೆ ತಲುಪಿಲ್ಲ. ೭೦ ರಿಂದ ೮೦ ಸಾವಿರ ಕುಟುಂಬಗಳಿರುವ ಕಡೆ ಕೇವಲ ೫ ಸಾವಿರ ಲೀಟರ್ ಹಾಲು ವಿತರಣೆ ಮಾಡಲಾಗಿದೆ. ನಿಗದಿತ ಪ್ರಮಾಣದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸಹ ನೀಡಿಲ್ಲ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳು ಬಡವರಿಗೆ ನೇರವಾಗಿ ತಲುಪುತ್ತಿದ್ದವು. ಆದರೆ ಇಂದಿನ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸಹಕಾರ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಈಗಾಗಲೇ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದ ಸುಮಾರು ೭೦ ರಿಂದ ೮೨ ಸಾವಿರ ಕುಟುಂಬಗಳಿಗೆ ರೈತರಿಂದ ತರಕಾರಿ ಖರೀದಿಸಿ ಮನೆ ಮನೆಗೆ ತೆರಳಿ ವಿತರಿಸಲಾಗಿದೆ. ಇದೀಗ ಆಲೆಮನೆ ಮಾಲೀಕರು ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಸಹಕಾರದಿಂದ ಕಡು ಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾಧ್ಯವಾದಷ್ಟು ನೆರವು ನೀಡಲು ಬದ್ಧವಾಗಿರುವುದಾಗಿ ತಿಳಿಸಿದರು.
ಕಬ್ಬಿನಗಾಣ ಹೊಂದಿರುವ ರೈತರ ಸಹಕಾರ ಸಂಘದ ಪ್ರಮುಖರಾದ ರಾಮಮೂರ್ತಿ, ಚಲುವ, ಪ್ರಕಾಶ್, ಮುರುಳಿ, ಸೀನ, ಪರಮೇಶ್, ಲಕ್ಷ್ಮಿ ಪ್ರಕಾಶ್, ಮಲ್ಲಿಕ, ಕೃಷ್ಣ, ಹಿರಿಯ ಪತ್ರಕರ್ತ ಕಣ್ಣಪ್ಪ, ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ಡಿ. ನರಸಿಂಹಮೂರ್ತಿ, ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಬಿ.ಕೆ ಶಿವಣ್ಣ, ಬಿ.ಎಸ್ ಗಣೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment