ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಪಡೆಯಲಾಗಿರುವ ಸಾಲ ಮರು ಪಾವತಿ ಮಾಡಲು ಕಾಲಾವಕಾಶ ನೀಡುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಮಂಗಳವಾರ ಯೋಜನಾ ಶಾಖಾ ಕಛೇರಿಯಲ್ಲಿ ವ್ಯವಸ್ಥಾಪಕರ ಮೂಲಕ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಪಡೆಯಲಾಗಿರುವ ಸಾಲ ಮರು ಪಾವತಿ ಮಾಡಲು ಕಾಲಾವಕಾಶ ನೀಡುವಂತೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮಂಗಳವಾರ ಹಳೇನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಛೇರಿಯಲ್ಲಿ ಮನವಿ ಸಲ್ಲಿಸಿದರು.
ಯೋಜನೆಯ ದೂರದೃಷ್ಟಿಯ ಫಲವಾಗಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಗ್ರಾಮ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಸ್ವಾಭಿಮಾನ, ಸ್ವಾವಲಂಬನೆಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಯಾವುದೇ ಚುನಾಯಿತ ಸರ್ಕಾರ ಮಾಡದಿರುವ ಕಾರ್ಯವನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸ್ತುತ ವಿಶ್ವದೆಲ್ಲೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ದೇಶಾದ್ಯಂತ ಲಾಕ್‌ಡೌನ್ ಜಾರಿ ಮಾಡಿದ ಹಿನ್ನಲೆಯಲ್ಲಿ ಯೋಜನೆವತಿಯಿಂದ ಸಾಲ ಪಡೆದಿರುವ ಮಹಿಳೆಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯಾವುದೇ ಚಟುವಟಿಕೆಗಳಿಲ್ಲದೆ ಆರ್ಥಿಕ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಇವರಿಗೆ ಸಾಲ ಮರುಪಾವತಿ ಮಾಡಲು ಈ ವರ್ಷದ ಕೊನೆಯವರೆಗೂ ಕಾಲಾವಕಾಶ ನೀಡಬೇಕೆಂದು ಹಾಗೂ ತುರ್ತು ಸಾಲದ ಅವಶ್ಯಕತೆ ಇರುವವರಿಗೆ ಸಾಲ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಕಛೇರಿ ವ್ಯವಸ್ಥಾಪಕಿ ಸುಧಾ ಅವರಿಗೆ ಮನವಿ ಸಲ್ಲಿಸಲಾಯಿತು. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್, ಮುಖಂಡರಾದ ಸುಬ್ಬೇಗೌಡ, ರವಿಕುಮಾರ್ ನಾಯ್ಕ, ಅಲಿಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:
Post a Comment