ಮಹಾರಾಷ್ಟ್ರದಿಂದ ಬಂದ ೧೮ ಜನ : ಕೊರೋನಾ ವೈರಸ್ ಭೀತಿ
ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏಕಾಏಕಿ ಕ್ವಾರಂಟೈನ್ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.ಭದ್ರಾವತಿ, ಮೇ. ೨೩: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏಕಾಏಕಿ ಕ್ವಾರಂಟೈನ್ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಸ್ಥಳೀಯರ ಗಮನಕ್ಕೆ ಬಾರದಂತೆ ಕ್ವಾರಂಟೈನ್ ನಿರ್ಮಾಣ ಮಾಡುವ ಮೂಲಕ ಮಹಾರಾಷ್ಟ್ರದಿಂದ ಬಂದಿರುವ ೧೮ ಜನರನ್ನು ನಿಗಾದಲ್ಲಿರಿಸಲು ಕರೆ ತರಲಾಯಿತು. ಈ ವಿಚಾರ ತಿಳಿದ ಗ್ರಾಮಸ್ಥರು ಕ್ಯಾರಂಟೈನ್ ಮುಂಭಾಗ ದಿಢೀರನೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ನಗರಸಭೆ ಪೌರಾಯುಕ್ತ ಮನೋಹರ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು.
No comments:
Post a Comment