ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದ ತಂಡ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಪರಿಶೀಲನೆ ನಡೆಸಿತು.
ಭದ್ರಾವತಿ, ಮೇ. ೨೪: ತಾಲೂಕು ಆರೋಗ್ಯಾಧಿಕಾರಿ ನೇತೃತ್ವದ ತಂಡ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಪರಿಶೀಲನೆ ನಡೆಸಿತು.
ಮಹಾರಾಷ್ಟ್ರದಿಂದ ಬಂದಿರುವ ೧೮ಜನರನ್ನು ಕ್ವಾರಂಟೈನ್ ಮಾಡಿರುವ ಹಿನ್ನಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಕೊನೆಯ ಹಂತದಲ್ಲಿ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಈ ಹಿನ್ನಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕ್ವಾರಂಟೈನ್ ಸಿಬ್ಬಂದಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಯಿತು. ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:
Post a Comment