ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಮಾಸ್ಕ್ ಧರಿಸದೆ ಆಸ್ಪತ್ರೆ ಪ್ರವೇಶಿಸಿದವರಿಗೆ ದಂಡ ವಿಧಿಸಲಾಯಿತು.
ಭದ್ರಾವತಿ, ಮೇ. ೯: ಇನ್ನು ಮುಂದೆ ಯಾರಾದರೂ ಮಾಸ್ಕ್ ಧರಿಸದೆ ಸಾರ್ವಜನಿಕ ಆಸ್ಪತ್ರೆ ಪ್ರವೇಶಿಸಿದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸದವರ ವಿರುದ್ಧ ದಂಡ ಹಾಕುವ ಅಧಿಕಾರ ಆರೋಗ್ಯ ಇಲಾಖೆಗೂ ಇದೆ.
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಿಂದ ಮಾಸ್ಕ್ ಧರಿಸದೆ ಆಸ್ಪತ್ರೆಗೆ ಬರುವವರಿಗೆ ೫೦ ರು. ದಂಡ ವಿಧಿಸಲಾಗುತ್ತಿದೆ. ಒಟ್ಟು ೧೦ ಮಂದಿಗೆ ಮಂದಿಗೆ ದಂಡ ವಿಧಿಸಲಾಗಿದ್ದು, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್, ಡಿ. ದರ್ಜೆ ನೌಕರರಾದ ಮುನಿರಾಜ್, ಪ್ರವೀಣ್, ಸೋಮು ಹಾಗೂ ಪೊಲೀಸ್ ಇಲಾಖೆ ವಾಹನ ಚಾಲಕ ಪ್ರಶಾಂತ್ ಪಾಲ್ಗೊಂಡಿದ್ದರು.

No comments:
Post a Comment