ಯೋಜನೆ ಸದ್ಬಳಕೆ ಮಾಡಿಕೊಳ್ಳಲು ರೈತರಿಗೆ ಮನವಿ
ಭದ್ರಾವತಿ, ಮೇ. ೧೯: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಕೃಷಿ ಹೊಂಡ ಹಾಗೂ ಕಂದಕ ಬದು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದಾಗಿದೆ.ಬಿಪಿಎಲ್ ಪಡಿತರ ಚೀಟಿ ಹೊಂದಿದ ರೈತರಿಗೆ ಹಾಗೂ ಪರಿಶಿಷ್ಟ ಜಾತಿ/ಪಂಗಡದ ರೈತರಿಗೆ ೧೦*೧೦*೩ ಮೀಟರ್ ಮತ್ತು ೧೫*೧೫*೩ ಮೀಟರ್ ಅಳತೆಯ ಕೃಷಿ ಹೊಂಡ ಹಾಗೂ ಜಮೀನಿನಲ್ಲಿ ಕಂದಕ ಬದು ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ತಾಲೂಕಿನ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ಬಿ.ಸಿ ಶಶಿಧರ್ ಮನವಿ ಮಾಡಿದ್ದಾರೆ.
No comments:
Post a Comment