ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಪೋನ್ ಇನ್ ಕಾರ್ಯಕ್ರಮ ನಡೆಯಿತು.
ಭದ್ರಾವತಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ದತೆಗಾಗಿ ವಿಷಯವಾರು ಕ್ಲಸ್ಟಾಂಶಗಳ ಬಗ್ಗೆ ಇರುವ ಸಂದೇಹಗಳು ಮತ್ತು ಗೊಂದಲಗಳನ್ನು ಪರಿಹರಿಸಲು ಹಮ್ಮಿಕೊಳ್ಳಲಾಗಿರುವ ಪೋನ್ ಇನ್ ಕಾರ್ಯಕ್ರಮದಲ್ಲಿ ಗುರುವಾರ ಕನ್ನಡ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.ಶಿಕ್ಷಕರಾದ ಡಾ. ಬಿ.ಎ ತಂಬೂಳಿ, ಕೆ. ಬಸವರಾಜ ಮತ್ತು ಅರಳೇಹಳ್ಳಿ ಅಣ್ಣಪ್ಪ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೆ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸುವಂತೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ವಿಷಯವಾರು ನಿರೀಕ್ಷಕರಾದ ಎಂ. ಸತೀಶ್, ಶಿವನೆಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ಮಕ್ಕಳು ಕನ್ನಡ ವಿಷಯದಲ್ಲಿನ ಸಂದೇಹ ಮತ್ತು ಗೊಂದಲಗಳನ್ನು ಪರಿಹರಿಸಿಕೊಂಡರು. ಮೇ.೨೦ರ ವರೆಗೆ ಕಾರ್ಯಕ್ರಮ ನಡೆಯಲಿದೆ.
No comments:
Post a Comment