ರಾಜ್ಯ ಸರ್ಕಾರ ಮೇ.೨೯ ‘ಆಶಾ ಸಂರಕ್ಷಣಾ ದಿನ’ವೆಂದು ಘೋಷಣೆ ಮಾಡುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಭದ್ರಾವತಿ, ಮೇ. ೨೯: ರಾಜ್ಯ ಸರ್ಕಾರ ಮೇ.೨೯ ‘ಆಶಾ ಸಂರಕ್ಷಣಾ ದಿನ’ವೆಂದು ಘೋಷಣೆ ಮಾಡುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ, ಆಶಾ ಕಾರ್ಯಕರ್ತೆಯರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಿ, ಹಲ್ಲೆಗೆ ಒಳಗಾದ ಆಶಾ ಕಾರ್ಯಕರ್ತೆಗೆ ಸೂಕ್ತ ಪರಿಹಾರ ನೀಡುವುದು. ಮಾರ್ಚ್ ತಿಂಗಳಿಂದ ಕೋವಿಡ್-೧೯ರ ಸಂಬಂಧ ಕರ್ತವ್ಯಕ್ಕೆ ನಿಯೋಜನೆಗೊಳಿಸುವ ಅವಧಿವರೆಗೂ ವಿಶೇಷ ಪ್ಯಾಕೇಜ್ ಮಾಸಿಕ ರು. ೧೦,೦೦೦ ನೀಡುವಂತೆ ಒತ್ತಾಯಿಸಿದರು.
ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‌ಗಳನ್ನು ನೀಡುವುದು. ಪಾನಮತ್ತರಾಗಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೈದವರಿಗೆ ಉಗ್ರ ಶಿಕ್ಷೆ ನೀಡುವ ಜೊತೆಗೆ ಮದ್ಯ ನಿಷೇಧ ಮಾಡುವುದು. ಕೋವಿಡ್-೧೯ರ ಪರಿಣಾಮ ಸಾವಿಗೀಡಾದ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ನೀಡುವಂತೆ ೫೦ ಲಕ್ಷ ರು. ವಿಮೆ ಸೌಲಭ್ಯವನ್ನು ಕೋವಿಡ್-೧೯ ಸೇವೆಯಲ್ಲಿರುವಾಗ ಸಾವಿಗೀಡಾದ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೂ ನೀಡುವಂತೆ ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ತಾಲೂಕು ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment