ಭದ್ರಾವತಿ ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ಮಂಗಳವಾರ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಎಳ್ಳನೀರು ವಿತರಣೆ ಮಾಡುವ ಮೂಲಕ ೨೫ ದಿನಗಳ ಮಜ್ಜಿಗೆ ವಿತರಣೆ ಸೇವೆ ಅಂತ್ಯಗೊಳಿಸಲಾಯಿತು.
ಭದ್ರಾವತಿ: ಕೊರೋನಾ ವೈರಸ್ ವಿರುದ್ಧ ಹಗಲಿರುಳು ಹೋರಾಟ ನಡೆಸುತ್ತಿರುವ ವೈದ್ಯರು, ಪೊಲೀಸರು ಮತ್ತು ಪೌರಕಾರ್ಮಿಕರ ಸಂಕಷ್ಟಕ್ಕೆ ಕಳೆದ ೨೬ ದಿನಗಳಿಂದ ನಿರಂತರವಾಗಿ ತಾಲೂಕಿನ ಬಾರಂದೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ಪದ್ಮಾವತಿ ದೇವಾಲಯದ ವಂದೇ ಮಾತರಂ ಟ್ರಸ್ಟ್ ಸ್ಪಂದಿಸುವ ಮೂಲಕ ಕಿರು ಸೇವೆಯನ್ನು ಮಂಗಳವಾರ ಕೊನೆಗೊಳಿಸಿದೆ.
ತಾಲೂಕಿನ ಚೆಕ್‌ಪೋಸ್ಟ್ ಹಾಗೂ ಆಯಾಕಟ್ಟಿನ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಪ್ರತಿದಿನ ಮಜ್ಜಿಗೆ ವಿತರಣೆ ಹಾಗೂ ಕೊನೆಯ ದಿನ ಎಳ್ಳನೀರು ವಿತರಣೆ ಮಾಡುವ ಮೂಲಕ ಗಮನ ಸೆಳೆಯಿತು.
ಅಲ್ಲದೆ ಕೊರೋನಾ ವೈರಸ್ ಕುರಿತು ಜಾಗೃತಿ ಜಾಥಾ ಸಹ ನಡೆಸಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವಲ್ಲಿ ಟ್ರಸ್ಟ್ ಯಶಸ್ವಿಯಾಗಿದೆ. ಟ್ರಸ್ಟ್ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಗ್ರಾಮಸ್ಥರು ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸೇವಾ ಕಾರ್ಯವನ್ನು ಯಶಸ್ವಿಗೊಳಿಸಿದ್ದಾರೆ.

No comments:
Post a Comment