ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಸ್ಪಷ್ಟನೆ
ಕೆ.ಜೆ ತಮ್ಮಣ್ಣಗೌಡ
ಭದ್ರಾವತಿ, ಮೇ. ೩೦: ತಾಲೂಕು ಪಂಚಾಯಿತಿಯಲ್ಲಿ ಅಂಗವಿಕಲರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸೌಲಭ್ಯಗಳನ್ನು ಕಲ್ಪಿಸಲುಮೀಸಲಿಡಲಾಗಿದ್ದ ಹಣ ಸರ್ಕಾರಕ್ಕೆ ಹಿಂದಿರುಗಿರುವುದರಲ್ಲಿ ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಸ್ಪಷ್ಟಪಡಿಸಿದ್ದಾರೆ.ಅವರು ಪತ್ರಿಕೆಯೊಂದಿಗೆ ಮಾತನಾಡಿ, ಸೌಲಭ್ಯಗಳನ್ನು ಕಲ್ಪಿಸಲು ಆನ್‌ಲೈನ್‌ನಲ್ಲಿ ಟೆಂಡರ್ ನಡೆದಿದೆ. ಈ ಪ್ರಕ್ರಿಯೆಯಲ್ಲಿ ನಾವು ಏನನ್ನು ಸಹ ಮಾಡಲು ಸಾಧ್ಯವಿಲ್ಲ. ೩ ಬಾರಿ ಟೆಂಡರ್ ಕರೆಯಲಾಗಿದ್ದು, ಯಾರು ಸಹ ಭಾಗವಹಿಸದ ಕಾರಣ ಹಣ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಣ ಬೇರೆ ಬಳಕೆಗೆ ಬರುವುದಿಲ್ಲ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಹಿಂದಿರುಗಿದೆ. ಸದಸ್ಯರು ನಮ್ಮ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.
No comments:
Post a Comment