ಭದ್ರಾವತಿಯಲ್ಲಿ ಬಡ ಶ್ರಮಿಕ ವರ್ಗದವರ ನೆರವಿಗೆ ಮುಂದಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮ ತಾಲೂಕಿನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸವಿತ ಸಮಾಜ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಶ್ರಮಿಕ ವರ್ಗದ ಸ್ಥಿತಿಗತಿಗಳನ್ನು ಅರಿತು ಆಹಾರ ಸಾಮಗ್ರಿ ವಿತರಿಸುವ ಮೂಲಕ ನೆರವಿಗೆ ಮುಂದಾದ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿಯಲ್ಲಿ ಬಡ ಶ್ರಮಿಕ ವರ್ಗದವರ ನೆರವಿಗೆ ಮುಂದಾದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಉಪಾಧ್ಯಕ್ಷ ಎಂ.ಎಸ್ ಶ್ರೀನಿವಾಸ್, ಕಾರ್ಯದರ್ಶಿ ಅಶೋಕ್‌ರಾವ್ ಘೋರ್ಪಡೆ, ಗೌರವಾಧ್ಯಕ್ಷ ವೀರಲಾಲ್, ತಾಲೂಕು ಛಾಯ ಗ್ರಾಹಕರ ಸಂಘದ ಅಧ್ಯಕ್ಷ ರಾಮಕೃಷ್ಣ, ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ರೆಡ್‌ಸನ್ ರಾಜು,ಸದಸ್ಯರಾದ ಜೆ. ಕುಮಾರ್, ಶಿವಪ್ರಸಾದ್ ಮತ್ತು ಪಿ. ಮಲ್ಲೇಶ್ ಇನ್ನಿತರರು ಅಭಿನಂದಿಸಿ ಕೃತಜ್ಞತೆ ಸಲ್ಲಿಸುವ ಮೂಲಕ ಮುಂದಿನ ದಿನಗಳಲ್ಲೂ ಇದೆ ರೀತಿ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದರು.
No comments:
Post a Comment