ಭದ್ರಾವತಿ ನಗರಸಭೆ ವ್ಯಾಪ್ತಿ ವಾರ್ಡ್ ೨ರಲ್ಲಿ ವಾಸಿಸುತ್ತಿರುವ ಕಡು ಬಡವರು, ಕೂಲಿ ಕಾರ್ಮಿಕರು, ನಿರಾಶ್ರಿತರು, ರಸ್ತೆ ಬದಿ ವಾಸಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ದಿನಸಿ ಸಾಮಗ್ರಿಗಳನ್ನು ವಿತರಿಸಿ ಕೊರೋನಾ ಕುರಿತು ಜಾಗೃತಿ ವಹಿಸುವಂತೆ ಮನವಿ ಮಾಡಿದರು.
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷನೆಯಾದ ನಂತರ ನಗರದಲ್ಲಿ ಕಡು ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ಇವರ ಸಂಕಷ್ಟಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ ನೆರವಿಗೆ ಮುಂದಾಗಿದೆ.ನಗರಸಭೆ ವ್ಯಾಪ್ತಿ ವಾರ್ಡ್ ೨ರಲ್ಲಿ ವಾಸಿಸುತ್ತಿರುವ ಕಡು ಬಡವರು, ಕೂಲಿ ಕಾರ್ಮಿಕರು, ನಿರಾಶ್ರಿತರು, ರಸ್ತೆ ಬದಿ ವಾಸಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ದಿನಸಿ ಸಾಮಗ್ರಿಗಳನ್ನು ವಿತರಿಸಿ ಕೊರೋನಾ ಕುರಿತು ಜಾಗೃತಿ ವಹಿಸುವಂತೆ ಮನವಿ ಮಾಡಿದರು.
ಶಿವಮೊಗ್ಗ-ಭದ್ರಾವತಿ ನಡುವೆ ಸಂಚಾರಿಸುವ ಮಾಕ್ಸಿ ಕ್ಯಾಬ್‌ಗಳ ಸುಮಾರು ೪೫ ಮಂದಿ ಚಾಲಕರ ಕುಟುಂಬಗಳಿಗೆ, ವಾರ್ಡ್ ೨ರ ವ್ಯಾಪ್ತಿಯ ಮೀನುಗಾರರ ಬೀದಿ, ಕೃಷ್ಣಸಿಂಗ್ ಕಾಂಪೌಂಡ್, ಕವಲಗುಂದಿ, ಲೋಯರ್‌ಹುತ್ತಾ, ಐಟಿಐ ಹಿಂಬಾಗದ ಎ.ಕೆ ಕಾಲೋನಿ, ಮತ್ತು ಕಡದಕಟ್ಟೆ ಬಲಭಾಗ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಒಟ್ಟು ಸುಮಾರು ೮೦೦ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಮಾಜಿ ನಗರಸಭಾ ಸದಸ್ಯ ಎಸ್.ಪಿ ಮೋಹನ್ ರಾವ್, ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ನಿರ್ದೇಶಕರು, ಸ್ಥಳೀಯ ಮುಖಂಡರು, ಎಂ.ಜೆ ಅಪ್ಪಾಜಿ ಅಭಿಮಾನಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment