ಸಿದ್ದರೂಢ ಮಠದಲ್ಲಿ ಸಿಹಿ ಭೋಜನದೊಂದಿಗೆ ವಿಶಿಷ್ಟ ಕಾರ್ಯಕ್ರಮ
ಭದ್ರಾವತಿ ಸಿದ್ದರೂಢ ಮಠದ ವತಿಯಿಂದ ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪತ್ರಕರ್ತರನ್ನು ವಿಶೇಷವಾಗಿ ಸನ್ಮಾನಿಸಿ ಪುಷ್ಪವೃಷ್ಠಿಯೊಂದಿಗೆ ಗೌರವಿಸಲಾಯಿತು.
ಭದ್ರಾವತಿ, ಮೇ. ೨: ಕೊರೋನಾ ವೈರಸ್ ಒಂದೆಡೆ ವ್ಯಾಪಕವಾಗಿ ಹರಡುತ್ತಿದ್ದು, ಮತ್ತೊಂದೆಡೆ ವೈರಸ್ ವಿರುದ್ಧ ವೈದ್ಯರು, ಪೊಲೀಸರು ಮತ್ತು ಪೌರಕಾರ್ಮಿಕರು, ಪತ್ರಕರ್ತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇವರ ಹೋರಾಟಕ್ಕೆ ನೈತಿಕವಾಗಿ ಮತ್ತಷ್ಟು ಬಲ ತುಂಬುವ ಕಾರ್ಯ ಸಮಾಜದಲ್ಲಿ ನಡೆಯುತ್ತಿವೆ. ಇದಕ್ಕೆ ಉದಾಹರಣೆ ಎಂಬಂತೆ ಶನಿವಾರ ನಗರದ ಸಿದ್ದರೂಢ ಮಠದಲ್ಲಿ ವಿಶಿಷ್ಟ ರೀತಿಯ ಕಾರ್ಯಕ್ರಮ ಜರುಗಿತು.ಸಿದ್ದರೂಢ ಆಶ್ರಮದ ವತಿಯಿಂದ ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಪತ್ರಕರ್ತರನ್ನು ವಿಶೇಷವಾಗಿ ಸನ್ಮಾನಿಸಿ ಪುಷ್ಪವೃಷ್ಠಿಯೊಂದಿಗೆ ಗೌರವಿಸಲಾಯಿತು. ಸಿಹಿ ಭೋಜನ ವ್ಯವಸ್ಥೆ ಕೈಗೊಳ್ಳುವ ಮೂಲಕ ಹಬ್ಬದ ಸಂಭ್ರಮಕ್ಕೆ ಮಠದ ಆಡಳಿತಾಧಿಕಾರಿಗಳು, ಟ್ರಸ್ಟಿಗಳು ಕಾರಣಕರ್ತರಾದರು.
ನಗರಸಭೆ ಪೌರಾಯುಕ್ತ ಮನೋಹರ್, ಅಧಿಕಾರಿಗಳಾದ ರಾಜ್‌ಕುಮಾರ್, ರುದ್ರೇಗೌಡ, ರಂಗರಾಜಪುರೆ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್, ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಚಿತ್ರದುರ್ಗ ಶ್ರೀ ಕಬೀರಾನಂದ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಶ್ರಮದ ಪ್ರಮುಖರಾದ ಉಪಾಧ್ಯಕ್ಷರಾದ ಬೆನಕಪ್ಪ, ಕಾರ್ಯದರ್ಶಿ ರಾಮಮೂರ್ತಿ ಟ್ರಸ್ಟಿಗಳಾದ ಗೋವಿಂದಪ್ಪ, ವಾಗೀಶ್, ಬಾಬು, ಬಿ ದಿವಾಕರ ಶೆಟ್ಟಿ, ಮಂಜುನಾಥರಾವ್, ಮಾರುತಿ, ವಿಜಯ್‌ಕುಮಾರ್, ಮಂಜುನಾಥ್, ಮುರುಡಪ್ಪ, ನಗರಸಭೆ ಸದಸ್ಯ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ ಮತ್ತಷ್ಟು ಹುಮ್ಮಸ್ಸು ನೀಡುವಂತಿದೆ,ಥ್ಯಾಂಕ್ಸ್ ಅನಂತ್.
ReplyDelete