ಭದ್ರಾವತಿ ತಾಲೂಕು ನೂತನ ತಾಲೂಕು ದಂಡಾಧಿಕಾರಿಯಾಗಿ
ಶಿವಕುಮಾರ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡರು.
ಭದ್ರಾವತಿ: ನೂತನ ತಾಲೂಕು ದಂಡಾಧಿಕಾರಿಯಾಗಿ ತಹಸೀಲ್ದಾರ್ ಶಿವಕುಮಾರ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಉಪಸ್ಥಿತಿಯಲ್ಲಿ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು. ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ ಮಲ್ಲಪ್ಪ, ಹೀರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್, ಪರಿಸರ ಅಭಿಯಂತರ ರುದ್ರೇಗೌಡ, ಕಂದಾಯಾಧಿಕಾರಿ ಪ್ರಶಾಂತ್, ಪ್ರೇಮ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕು ನೂತನ ತಾಲೂಕು ದಂಡಾಧಿಕಾರಿಯಾಗಿ ಶಿವಕುಮಾರ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದು, ಇವರನ್ನು ಆರೋಗ್ಯ ಇಲಾಖೆ ವತಿಯಿಂದ ಸ್ವಾಗತಿಸಲಾಯಿತು.
ಶಿವಕುಮಾರ್ ಪರಿಚಯ: ಶಿವಕುಮಾರ್‌ರವರು ೨೦೦೦ ಇಸವಿಯಲ್ಲಿ ತಹಸೀಲ್ದಾರ್ ಹುದ್ದೆಯಲ್ಲಿ ನೇಮಕಗೊಂಡಿದ್ದು, ಸುಮಾರು ೧೯ ವರ್ಷ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಂತರ ಹಾವೇರಿ ತಾಲೂಕು ದಂಡಾಧಿಕಾರಿಯಾಗಿ ಸುಮಾರು ೨ ವರ್ಷ ಸೇವೆ ಸಲ್ಲಿಸಿ ಇದೀಗ ಭದ್ರಾವತಿಗೆ ವರ್ಗಾವಣೆಗೊಂಡಿದ್ದಾರೆ.
ಈ ಹಿಂದೆ ಸೋಮಶೇಖರ್‌ರವರು ಸುಮಾರು ೧ ವರ್ಷ ತಾಲೂಕು ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಏ.೩೦ರಂದು ನಿವೃತ್ತಿ ಹೊಂದಿದ್ದರು. ಇದೀಗ ತೆರವಾಗಿದ್ದ ಹುದ್ದೆಗೆ ಶಿವಕುಮಾರ್ ನೇಮಕಗೊಂಡಿದ್ದಾರೆ.
No comments:
Post a Comment