ಭದ್ರಾವತಿ, ಮೇ. ೨೮: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಖಬರ್‌ಸ್ಥಾನ ಬಳಿ ಮೂವರು ಯುವಕರ ನಡುವೆ ಜಗಳ ನಡೆದು ಓರ್ವನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮೆಹಬೂಬ್ ಪಾಷ(೨೮) ಎಂಬಾತ ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಬಾರಕ್(೨೨) ಮತ್ತು ಶಕಿಬ್ ಎಂಬುವರ ಜೊತೆ ಸೇರಿ ಮೆಹಬೂಬ್ ಪಾಷ ಮದ್ಯಪಾನ ಮಾಡುತ್ತಿದ್ದಾಗ ಯಾವುದೋ ಕಾರಣಕ್ಕೆ ಜಗಳ ಉಂಟಾಗಿದ್ದು, ಮೆಹಬೂಬ್ ಪಾಷ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಕಾಗದನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೊಮ್ಮನಕಟ್ಟೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಓ.ಸಿ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ, ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಆಗಾಗ ಈ ರೀತಿಯ ಘಟನೆಗಳು ಮರುಗಳಿಸುತ್ತಿದ್ದು, ಪೊಲೀಸ್ ಇಲಾಖೆ ಈ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ಕೈಗೊಂಡು ಕಾನೂರು ಬಾಹಿರ ಚಟುವಟಿಕೆಗಳಿಗೆ ಕಡಿವಾಣಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
No comments:
Post a Comment