ಶಾಲಾ ಮಕ್ಕಳಿಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಆರಂಭವಾಗುವ ತನಕ ಆಹಾರ ಪದಾರ್ಥಗಳನ್ನು ಅವರ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಭದ್ರಾವತಿಯಲ್ಲಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಭದ್ರಾವತಿ, ಮೇ. ೨೪: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಹಾಲಿನ ಪೌಡರ್ ಮತ್ತು ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಸೌಲಭ್ಯಗಳು ಸ್ಥಗಿತಗೊಂಡಿರುವ ಕಾರಣ ಕಳೆದ ೨-೩ ತಿಂಗಳಿನಿಂದ ಆಹಾರ ಪದಾರ್ಥಗಳು ಹಾಳಾಗುತ್ತಿವೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಆರಂಭವಾಗುವ ತನಕ ಆಹಾರ ಪದಾರ್ಥಗಳನ್ನು ಅವರ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸರ್ಕಾರ ಕೈಗೊಂಡಿರುವ ಯೋಜನೆ ಶಾಲಾ ಮಕ್ಕಳಿಗೆ ಸದ್ಬಳಕೆಯಾಗಬೇಕು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಗಮನ ಹರಿಸಬೇಕು. ಪ್ರಸ್ತುತ ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಲಾಕ್‌ಡೌನ್ ಜಾರಿ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೆ ಶ್ರೀ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜೀವನ ಸಾಗಿಸುವುವೇ ಕಷ್ಟಕರವಾಗಿದೆ.
ಈ ನಡುವೆ ಖಾಸಗಿ ಶಾಲೆಗಳು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಶಾಲೆಗಳಲ್ಲಿ ದಾಖಲಾತಿ ಪ್ರಾರಂಭಿಸುವ ಮೊದಲೇ ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಸಂದೇಶ ಕಳುಹಿಸುತ್ತಿದ್ದು, ಮುಂಗಡ ಶುಲ್ಕ ಪಾವತಿಸುವಂತೆ ಒತ್ತಾಯಿಸಲಾಗುತ್ತಿದೆ. ಇದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕೈಗೊಳ್ಳಬೇಕು. ಪೋಷಕರ ಆತಂಕ ದೂರ ಮಾಡಿ ಮುಖಂಡ ಹಣ ಪಾವತಿಸಲು ಕಾಲಾವಕಾಶ ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
No comments:
Post a Comment