ಭದ್ರಾವತಿ ತಾಲೂಕಿನ ದೇವರನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕ್ವಾರಂಟೈನ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ಪಂಜಾಬ್ ನಿವಾಸಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಯಿತು.
ಭದ್ರಾವತಿ, ಮೇ. ೧೭: ತಾಲೂಕಿನ ದೇವರನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕ್ವಾರಂಟೈನ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ಪಂಜಾಬ್ ನಿವಾಸಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಯಿತು.
ಮೂಲತಃ ಪಂಜಾಬ್‌ನ ೪೩ ಮಂದಿ ದೆಹಲಿಯಿಂದ ರೈಲಿನ ಮೂಲಕ ಹೊರಟು ಹುಬ್ಬಳ್ಳಿಯಲ್ಲಿ ಇಳಿದು ಅಲ್ಲಿಂದ ಬಸ್ ಮೂಲಕ ಶಿವಮೊಗ್ಗ ನಗರಕ್ಕೆ ಮೇ.೧೬ರ ಶನಿವಾರ ರಾತ್ರಿ ಆಗಮಿಸಿದ್ದು, ಅವರನ್ನು ದೇವರನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್‌ಗೆ ಕರೆತರಲಾಗಿತ್ತು.
ಭಾನುವಾರ ಆರ್‌ಸಿಎಚ್‌ಓ ಡಾ. ನಾಗರಾಜ್ ನಾಯ್ಕ ನೇತೃತ್ವದ ತಂಡ ಗಂಟಲು ದ್ರವ ಪರೀಕ್ಷೆ ನಡೆಸಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕೊಟ್ಟಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ಅಂತರಗಂಗೆ ವೈದ್ಯಾಧಿಕಾರಿ ಡಾ. ಗಿರೀಶ್, ವಸತಿ ಶಾಲೆ ಪ್ರಾಂಶುಪಾಲ ಬಸವರಾಜ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್, ಕವಿತಾರಾಣಿ, ನೆಲ್ಸನ್ ಕುಮಾರ್, ಸೋಮಶೇಖರ್ ಪ್ರದೀಪ್, ಚಾಲಕ ಅಮೀರ್ ಇನ್ನಿತರರು ತಂಡದಲ್ಲಿದ್ದರು.
No comments:
Post a Comment