ಭದ್ರಾವತಿಯಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ದಿನಸಿ ಸಾಮಗ್ರಿ ವಿತರಿಸಿ ಆಶೀರ್ವದಿಸಿದ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಗೆ ಕನ್ನಡ ಪ್ರಭ ಪತ್ರಿಕೆಯ ನಮ್ಮ ಊರು ನಮ್ಮ ಜಿಲ್ಲೆ ವಿಶೇಷ ಸಂಚಿಕೆಯನ್ನು ನೀಡಲಾಯಿತು.
ಭದ್ರಾವತಿ, ಮೇ. ೧: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಯಾವುದನ್ನು ಲೆಕ್ಕಿಸದೆ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ನಗರದ ಪತ್ರಕರ್ತರ ಯೋಗ ಕ್ಷೇಮಾ ವಿಚಾರಿಸುವ ಮೂಲಕ ಅವರ ನೆರವಿಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮುಂದಾಗಿದ್ದಾರೆ.ಲಾಕ್‌ಡೌನ್ ಘೋಷಣೆಯಾದ ನಂತರ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ಈ ನಡುವೆ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು, ಶ್ರೀಗಳು ಪತ್ರಕರ್ತರು ಸಹ ಸಂಕಷ್ಟಕ್ಕೆ ಒಳಗಾಗಿರುವುದನ್ನು ಮನಗಂಡು ಶ್ರೀಮಠದಿಂದ ದಿನಸಿ ಸಾಮಗ್ರಿಗಳನ್ನು ವಿತರಿಸಿ ಆಶೀರ್ವದಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಹಾಗೂ ಮಠದ ಪ್ರಮುಖರು ಉಪಸ್ಥಿತರಿದ್ದರು.
ಇದೆ ರೀತಿ ಸಂಕಷ್ಟಕ್ಕೆ ಒಳಗಾಗಿರುವ ಪತ್ರಕರ್ತರಿಗೆ ತಮಿಳು ಸಮಾಜ ಸಹ ನೆರವಾಗಿದ್ದು, ದಿನಸಿ ಸಾಮಗ್ರಿಗಳನ್ನು ವಿತರಿಸಿ ಬೆಂಬಲ ನೀಡಿದೆ.
No comments:
Post a Comment