ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ಛಲವಾದಿ ಮಹಾಸಭಾ ವತಿಯಿಂದ ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ಭದ್ರಾವತಿ, ಮೇ. ೨೬: ಕೊರೋನಾ ವೈರಸ್ ಪರಿಣಾಮ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಛಲವಾದಿ ಮಹಾಸಭಾ ಮುಂದಾಗಿದ್ದು, ಸುಮಾರು ೩೦೦ ಮಂದಿ ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ಮನೋಹರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಮುಖಂಡರಾದ ಜಯರಾಜ್, ಇ.ಪಿ ಬಸವರಾಜ್, ಮಹೇಶ್, ಆದಿತ್ಯಶಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment