ಭದ್ರಾವತಿ ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆಂಚೇನಹಳ್ಳಿ, ಬಾರಂದೂರು, ಹಿರಿಯೂರು ಸೇರಿದದಂತೆ ೮ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೀರು ಸರಬರಾಜು ಕಾರ್ಮಿಕರಿಗೆ, ವಿಕಲಚೇತನರಿಗೆ ಗುರುವಾರ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಮೇ. ೭: ಕೊರೋನಾ ವೈರಸ್ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ ಪರಿಣಾಮ ಕಡು ಬಡವರು, ನಿರಾಶ್ರಿತರು, ಕೂಲಿ ಕಾರ್ಮಿಕರು, ಕೊಳಗೇರಿ ನಿವಾಸಿಗಳು, ವಿಕಲಚೇತನರು ಸೇರಿದಂತೆ ಶ್ರೀಸಾಮಾನ್ಯರು ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯನ್ನು ಅರಿತುಕೊಂಡಿರುವ ಕೆಲವು ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ದಾನಿಗಳು ನೆರವಿಗೆ ಮುಂದಾಗಿದ್ದಾರೆ.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ಪ್ರತಿನಿಧಿಸುವ ಸ್ವಕ್ಷೇತ್ರ ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆಂಚೇನಹಳ್ಳಿ, ಬಾರಂದೂರು, ಹಿರಿಯೂರು ಸೇರಿದದಂತೆ ೮ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೀರು ಸರಬರಾಜು ಕಾರ್ಮಿಕರಿಗೆ, ವಿಕಲಚೇತನರಿಗೆ ಗುರುವಾರ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ಬೆಂಗಳೂರಿನ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ ಡಾ. ಅನುರಾಧ ಪಟೇಲ್ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಮಾಜಿ ಸದಸ್ಯ ಎಸ್. ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸುಮಾರು ೮೦೦ ರಿಂದ ೧೦೦೦ ಮಂದಿಗೆ ಆಹಾರ ಸಾಮಾಗ್ರಿ ವಿತರಿಸಲಾಯಿತು.
No comments:
Post a Comment