ಭದ್ರಾವತಿ ಹಳೇನಗರದ ಶಂಕರ ಮಠದ ಬಳಿ ಭದ್ರಾ ನದಿ ಸಮೀಪದಲ್ಲಿ ಶನಿವಾರ ಸಂಜೆ ಎರಡು ಅಪರಿಚಿತ ಮೃತದೇಹಗಳು ಪತ್ತೆಯಾಗಿವೆ.
ಭದ್ರಾವತಿ, ಜೂ. ೧೩: ಹಳೇನಗರದ ಶಂಕರ ಮಠದ ಬಳಿ ಭದ್ರಾ ನದಿ ಸಮೀಪದಲ್ಲಿ ಶನಿವಾರ ಸಂಜೆ ಎರಡು ಅಪರಿಚಿತ ಮೃತದೇಹಗಳು ಪತ್ತೆಯಾಗಿವೆ.
ನದಿ ದಡದಲ್ಲಿ ನಿರ್ಮಿಸಲಾಗಿರುವ ಕೊಳಚೆ ನೀರು ಶುದ್ಧೀಕರಣ ಘಟಕದ ಒಳಭಾಗದಲ್ಲಿ ಸುಮಾರು ೩೫ ರಿಂದ ೪೦ ವರ್ಷ ವಯಸ್ಸಿನ ಓರ್ವ ಪುರುಷ, ಓರ್ವ ಮಹಿಳೆ ಮೃತದೇಹ ಪತ್ತೆಯಾಗಿದೆ. ನದಿ ದಡದ ದನ, ಕುರಿಗಾಯಿಗಳಿಗೆ ಕೊಳೆತ ಮೃತದೇಹಗಳ ವಾಸನೆ ಬಂದಿದ್ದು, ಈ ಹಿನ್ನಲೆಯಲ್ಲಿ ಒಳಭಾಗ ಪ್ರವೇಶಿಸಿ ಪರಿಶೀಲನೆ ನಡೆಸಿದಾಗ ೨ ಮೃತದೇಹಗಳು ಪತ್ತೆಯಾಗಿವೆ.
ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಹಳೇನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದು, ಮೃತದೇಹಗಳ ಸುಳಿವು ಇನ್ನು ಪತ್ತೆಯಾಗಿಲ್ಲ.
No comments:
Post a Comment