ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಭದ್ರಾವತಿ, ಜೂ. ೨೬: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಬಹಳ ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದೆ ಕನಕನಗರದ ಖಾಸಗಿ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಇದೀಗ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ಥಳವಕಾಶ ಕಲ್ಪಿಸಲಾಗಿದ್ದು, ನೂತನ ಕಟ್ಟಡ ಶೀಘ್ರದಲ್ಲಿಯೇ ನಿರ್ಮಾಣಗೊಳ್ಳಲಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಕಾರ್ಯದರ್ಶಿ ಸತೀಶ್ ಮತ್ತು ನಿರ್ದೇಶಕರು ಹಾಗೂ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment