ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಭಿನಂದಿಸಲಾಯಿತು.
ಭದ್ರಾವತಿ, ಜೂ. ೨೫: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಗುರುವಾರ ಅಭಿನಂದಿಸಲಾಯಿತು.
ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್‌ಗಳ ಕರ್ತವ್ಯವನ್ನು ಶ್ಲಾಘಿಸಿ ಅಭಿನಂದಿಸುವ ಜೊತೆಗೆ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಿಲಿ ಸಲ್ಲಿಸಿ ಗೌರವ ಸೂಚಿಸಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಆರ್. ಕವಿತಾ, ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ಅಧ್ಯಕ್ಷೆ ಶಿವಮ್ಮ ಶ್ರಿನಿವಾಸ್, ಉಪಾಧ್ಯಕ್ಷೆ ಧನಲಕ್ಷ್ಮಿ ರಾಮಣ್ಣ, ಲಾಬ್ ಟೆಕ್ನಿಷಿಯನ್ ಸಚಿನ್ ಸೇರಿದಂತೆ ಟ್ರಸ್ಟ್ ಮಹಿಳಾ ಘಟಕದ ೨೧ ಮಂದಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ಅಭಿನಂದಿಸಲಾಯಿತು.
No comments:
Post a Comment