ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುತ್ತಿದೆ.
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಗರಸಭೆ ಆಡಳಿತ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಬುಧವಾರ ಚಾಲನೆ ನೀಡಿದೆ.
ಕಳೆದ ಕೆಲವು ದಿನಗಳ ಹಿಂದೆ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಹುತ್ತಾಕಾಲೋನಿ ಮನೆಯೊಂದರಲ್ಲಿ ಸುಮಾರು ೭ ಕುರಿಗಳು ಬಲಿಯಾಗಿದ್ದವು. ಈ ಹಿನ್ನಲೆಯಲ್ಲಿ ಎಚ್ಚೆದ್ದುಕೊಂಡಿರುವ ನಗರಸಭೆ ಆಡಳಿತ ಹುತ್ತಾಕಾಲೋನಿ ಮತ್ತು ಜಿಂಕ್‌ಲೈನ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗುತ್ತಿದೆ.
ತರೀಕೆರೆ ರಸ್ತೆಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಸುಮಾರು ೧೫ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನೆರವೇರಿಸಲಾಗಿದ್ದು, ಗುಣಮುಖಗೊಂಡ ನಂತರ ಪುನಃ ಬಿಡುಗಡೆ ಮಾಡಲಿದ್ದಾರೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಶಸ್ತ್ರ ಚಿಕಿತ್ಸೆ ತಜ್ಞರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment