ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಜೆ. ಬಸವರಾಜಪ್ಪನವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಜೂ. ೨೪: ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತಿದ್ದ. ಜೆ. ಬಸವರಾಜಪ್ಪ ವಯೋನಿವೃತ್ತಿ ಹೊಂದಿದರು.
ಕೋಡಿಹೊಸೂರು ಗ್ರಾಮದ ಜೆ. ಬಸವರಾಜಪ್ಪನವರ ಕರ್ತವ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷ ಚಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ಭೈರೇಶ್‌ಕುಮಾರ್, ಸದಸ್ಯ ಲಕ್ಷ್ಮೀಪತಿ ಇನ್ನಿತರ ಸದಸ್ಯರು ಮತ್ತು ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment