ಅಮಾನತು ಆದೇಶ ಪತ್ರ
ಭದ್ರಾವತಿ, ಜೂ. ೩೦: ಕುವೆಂಪು ವಿಶ್ವ ವಿದ್ಯಾಲಯ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವೆ ಡಿ.ವಿ ಗಾಯತ್ರಿಯವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ನೀಡಿ ಸರ್ಕಾರಿ ಉದ್ಯೋಗ ಪಡೆದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಸೇವೆಯಿಂದ ಅಮಾನುಗೊಳಿಸಿ ಆದೇಶಿಸಲಾಗಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೇಮಕವಾದಂತಹ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇದರನ್ವಯ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಶ್ವವಿದ್ಯಾಲಯದ ನಿಯಮಾನುಸಾರ ಇಲಾಖಾ ವಿಚಾರಣೆ ಕಾಯ್ದಿರಿಸಿ ಕುಲಪತಿಗಳ ಆದೇಶದ ಮೇರೆಗೆ ಅಮಾನುಗೊಳಿಸಲಾಗಿದೆ ಎಂದು ಕುಲಸಚಿವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ೩ ದಿನಗಳ ಹಿಂದೆ ಈ ಸಂಬಂಧ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿತ್ತು.
No comments:
Post a Comment