ಸಾಧನಾ ಪತ್ರದ ಮೂಲಕ ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ೨ನೇ ಅವಧಿಯ ಮೊದಲ ವರ್ಷದ ಸಾಧನೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರರವರ ಸಾಧನೆ ಮನೆ ಮನೆಗೆ ತಿಳಿಸುವ ೩ ದಿನಗಳ ಕಾರ್ಯಕ್ರಮಕ್ಕೆ ಶನಿವಾರ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಭದ್ರಾವತಿ, ಜೂ. ೬: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ೨ನೇ ಅವಧಿಯ ಮೊದಲ ವರ್ಷದ ಸಾಧನೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರರವರ ಸಾಧನೆ ಪ್ರತಿಯೊಬ್ಬರಿಗೂ ತಿಳಿಸಿಕೊಡುವ ನಿಟ್ಟಿನಲ್ಲಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಮನೆ ಮನೆಗೆ ಸಾಧನಾ ಪತ್ರ ವಿತರಿಸುವ ೩ ದಿನಗಳ ಕಾರ್ಯಕ್ರಮಕ್ಕೆ ಶನಿವಾರ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಹಾಗೂ ಸಂಸದರ ಸಾಧನೆಗಳನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಸಂದೇಶಗಳನ್ನು ತಿಳಿಸಿದರು.
ತಾಲೂಕು ಬಿಜೆಪಿ ಮಂಡಲ ಪ್ರಭಾರಿ ಜ್ಞಾನೇಶ್ವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಮುಖಂಡರಾದ ಎಂ. ಮಂಜುನಾಥ್, ಹನುಮಂತನಾಯ್ಕ, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥಚಾರ್, ಗಣೇಶ್ ಹಾಗೂ ಹೊಸಮನೆ ಬೂತ್ ೯೩ರ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಹಾಗೂ ಸಂಸದರ ಸಾಧನೆಗಳನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಸಂದೇಶಗಳನ್ನು ತಿಳಿಸಿದರು.
No comments:
Post a Comment