ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ, ವಸತಿ ನಿಲಯಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಕೈಗೊಳ್ಳಲಾಯಿತು.
ಭದ್ರಾವತಿ, ಜೂ. ೨೪: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗುರುವಾರದಿಂದ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಹಾಗೂ ವಸತಿ ನಿಲಯಗಳಿಗೆ ಪಂಚಾಯಿತಿ ವತಿಯಿಂದ ಕೊರೋನಾ ವೈರಸ್ ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಕೈಗೊಳ್ಳಲಾಯಿತು.
ಗ್ರಾಮೀಣ ಭಾಗದಲ್ಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆಯಾಗದೆ ಸಾರಿಗೆ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ವತಿಯಿಂದ ಈಗಾಗಲೇ ಕೈಗೊಳ್ಳಲಾಗಿದೆ. ಅಲ್ಲದೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ವತಿಯಿಂದ ಸಹ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಸಿಂಗಮನೆ ಗ್ರಾಮ ಪಂಚಾಯಿತಿ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಉಮಾ, ಸದಸ್ಯರಾದ ಟಿ.ಡಿ ಶಶಿಕುಮಾರ್, ಜೆ. ಸುಜಾತ, ಅಭಿವೃದ್ಧಿ ಅಧಿಕಾರಿ ಸೋಮಶೇಖರ್, ಕಾರ್ಯದರ್ಶಿ ರೇವಣ್ಣ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment