ಭದ್ರಾವತಿ, ಜೂ. ೧೫: ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಕೊರೋನಾ ವೈರಸ್ ನಿರ್ಮೂಲನೆಗಾಗಿ ಹಗಲಿರುಳು ಶ್ರಮಿಸುತ್ತಿರುವವರಿಗೆ ಜೂ.೧೬ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಕೊರೋನಾ ವೈರಸ್ ನಿರ್ಮೂಲನೆಯಲ್ಲಿ ವೈದ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪೊಲೀಸರು ಮತ್ತು ಪೌರಕಾರ್ಮಿಕರು ಸೇರಿದಂತೆ ಇನ್ನಿತರರ ಶ್ರಮ ಹೆಚ್ಚಿನದ್ದಾಗಿದೆ. ಈ ಹಿನ್ನಲೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗಿದ್ದು, ಸಮಾರಂಭ ಯಶಸ್ವಿಗೊಳಿಸಲು ಕೋರಲಾಗಿದೆ.
ಸಂಸದರಿಂದ ಪ್ರಗತಿ ಪರಿಶೀಲನಾ ಸಭೆ:
ಬೆಳಿಗ್ಗೆ ೧೦.೩೦ಕ್ಕೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಧ್ಯಕ್ಷತೆ ಪ್ರಗತಿಪರಿಶೀಲನಾ ಸಭೆ ಆಯೋಜಿಸಲಾಗಿದೆ. ತಾಲೂಕಿನ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಾರ್ಯನಿರ್ವಹಣಾಧಿಕಾರಿಗಳು ಕೋರಿದ್ದಾರೆ.
No comments:
Post a Comment