ಭದ್ರಾವತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಕೋಟ್ರೇಶಪ್ಪ ಪ್ರಭಾರ ಅಧಿಕಾರ ವಹಿಸಿಕೊಂಡರು.
ಭದ್ರಾವತಿ, ಜೂ. ೪: ಕೊನೆಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುವಾರ ಕರ್ತವ್ಯದಿಂದ ಬಿಡುಗಡೆಗೊಂಡಿದ್ದು, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಕೋಟ್ರೇಶಪ್ಪ ಪ್ರಭಾರ ಅಧಿಕಾರ ವಹಿಸಿಕೊಂಡರು.
ತಾಲೂಕು ಪಂಚಾಯಿತಿ ಸದಸ್ಯರು ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ವಿರುದ್ಧ ಬುಧವಾರ ಹಲವು ಆರೋಪಗಳನ್ನು ಮಾಡುವ ಮೂಲಕ ಕರ್ತವ್ಯದಿಂದ ಬಿಡುಗಡೆಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮ ಕರ್ತವ್ಯದಿಂದ ತಕ್ಷಣ ಬಿಡುಗಡೆಗೊಳಿಸುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ದೂರವಾಣಿ ಮೂಲಕ ಭರವಸೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಪ್ರಭಾರ ಅಧಿಕಾರಿಯಾಗಿ ಡಾ. ಕೋಟ್ರೇಶಪ್ಪ ಅವರನ್ನು ನೇಮಕಗೊಳಿಸಿದ್ದಾರೆ. ತಮ್ಮಣ್ಣಗೌಡರವರು ಅಧಿಕಾರ ಹಸ್ತಾಂತರಿಸಿದರು.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಸ್. ರಮೇಶ್, ಸದಸ್ಯ ಕೆ. ಮಂಜುನಾಥ್, ಮುಖಂಡರಾದ ಶ್ರೀಧರ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:
Post a Comment