ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಭದ್ರಾವತಿ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ಯುವಪಡೆ ವತಿಯಿಂದ ಗುರುವಾರ ಕೆಜಿಎನ್ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೮: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನಗರದ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ಯುವಪಡೆ ವತಿಯಿಂದ ಗುರುವಾರ ಕೆಜಿಎನ್ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಕಮಿಟಿ ಯುವಪಡೆ ಮುಖಂಡರು ಮಾತನಾಡಿ, ಚೀನಾ ದೇಶದ ನಡೆಯನ್ನು ತೀವ್ರವಾಗಿ ಖಂಡಿಸಿದರು. ವೀರಯೋಧರ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಸಂತಾಪ ಸೂಚಿಸಿ ಮೌನಾಚರಣೆ ನಡೆಸಿದರು.
ನಗರಸಭೆ ಪೌರಾಯುಕ್ತ ಮನೋಹರ್, ಪ್ರಗತಿಪರ ಸಂಘಟನೆಗಳ ಮುಖಂಡ ಮುನಿರ್ ಅಹಮದ್, ಕಮಿಟಿ ಯುವಪಡೆ ಅಧ್ಯಕ್ಷ ಅಸಾದುಲ್ಲಾ ಖಾನ್, ಉಪಾಧ್ಯಕ್ಷ ಮಹಮದ್ ಶಾಹಿದ್, ಕಾರ್ಯದರ್ಶಿ ಮಹಮ್ಮದ್ ಇಮ್ರಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನದೀಮ್ ಸ್ವಾಗತಿಸಿದರು. ಅಬ್ದುಲ್ ಖದೀರ್ ನಿರೂಪಿಸಿದರು.
No comments:
Post a Comment