ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕರೆ
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಇಸ್ಪಾತ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಭದ್ರಾವತಿ, ಜೂ. ೫: ಇತ್ತೀಚಿನ ವರ್ಷಗಳಲ್ಲಿ ಪರಿಸರ ನಾಶದಿಂದ ಉಂಟಾಗುತ್ತಿರುವ ದುಷ್ಪರಿಣಾಗಳಿಂದ ಎಚ್ಚೆತ್ತುಕೊಂಡಿರುವ ನಾಗರೀಕ ಸಮಾಜ ಇದೀಗ ಪರಿಸರ ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧೆಡೆ ಶುಕ್ರವಾರ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ವಿಐಎಸ್‌ಎಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ:
ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಕೊರೋನಾ ಮಹಾಮಾರಿ ನಾವು ಎಷ್ಟು ಕನಿಷ್ಟ ಸಂಪನ್ಮೂಲಗಳೊಂದಿಗೆ ಬದುಕಬಹುದು ಎಂಬುದನ್ನು ಕಲಿಸಿದೆ. ನಾವೆಲ್ಲರೂ ಪ್ರಕೃತಿಯನ್ನು ರಕ್ಷಿಸಬೇಕು ಹಾಗೂ ಕಾರ್ಖಾನೆಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಕಾರ್ಯಪಾಲಕ ನಿರ್ದೇಶಕ ಕೆಎಲ್‌ಎಸ್ ರಾವ್ ತಿಳಿಸಿದರು.
ಅವರು ಕಾರ್ಖಾನೆಯ ಇಸ್ಪಾತ್ ಭವನದಲ್ಲಿ ಪರಿಸರ ಧ್ವಜಾರೋಹಣ ನೆರವೇರಿಸಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಈ ವರ್ಷದ ಧ್ಯೇಯ ವಾಕ್ಯ ‘ಜೀವ ವೈವಿಧ್ಯತೆ - ಪರಿಸರಕ್ಕೆ ಸಮಯ’ ಎಂಬುದಾಗಿದೆ ಎಂದರು.
ಪರಿಸರ ನೀತಿ ಹಾಗೂ ಪ್ರತಿಜ್ಞೆಯನ್ನು ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆ ಮಂಡಿಸಲಾಯಿತು. ಮುಖ್ಯ ಮಹಾ ಪ್ರಭಂಧಕ(ವರ್ಕ್ಸ್) ಸುರಜಿತ್ ಮಿಶ್ರಾ, ಎಂ. ಕೃಷ್ಣ, ವಿಕಾಸ್ ಬಸೇರ್, ಎಂ.ಎಸ್ ಕುಮಾರ್. ಡಾ. ಎಂ.ವೈ ಸುರೇಶ್. ಕೆ ಹರಿಶಂಕರ್, ಕೆ.ಎನ್ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು. ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿ.ಎಮ್ ಉನ್ನಿ ಕೃಷ್ಣನ್ ಪ್ರಾರ್ಥಿಸಿದರು. ಲೋಕೇಶ್ವರ್ ಸ್ವಾಗತಿಸಿದರು. ಎಲ್. ಕುತಲನಾಥನ್ ಕಾರ್ಯಕ್ರಮ ನಿರೂಪಿಸಿದರು.
ಮಲೆನಾಡ ಹಸಿರು ತಂಡದವತಿಯಿಂದ ಭದ್ರಾವತಿ ಹೊಸ ಸೇತುವೆ ರಸ್ತೆಯ ಮಧ್ಯ ಭಾಗದ ಡಿವೈಡರ್‌ನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಮಲೆನಾಡ ಹಸಿರು ತಂಡದಿಂದ ಪರಿಸರ ದಿನ:
ನಗರದ ಮಲೆನಾಡ ಹಸಿರು ತಂಡದವತಿಯಿಂದ ಹೊಸ ಸೇತುವೆ ರಸ್ತೆಯ ಮಧ್ಯ ಭಾಗದ ಡಿವೈಡರ್‌ನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಪೌರಾಯುಕ್ತ ಮನೋಹರ್ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆನಂದ್, ಶಿವಲಿಂಗೇಗೌಡ, ವಲಯ ಅರಣ್ಯಾಧಿಕಾರಿ ಸೀನಪ್ಪ ಭೋವಿ, ಸೋಮಶೇಖರ್, ಮಾಲತೇಶ್, ಬಿ.ಎಚ್ ಸೋಮಶೇಖರ್, ನಾಗಪ್ರಸಾದ್, ಬಿ.ಎಸ್ ಮುರಳಿ, ನವೀನ್ ಶೆಟ್ಟಿ, ನವೀನ್ ಎರೆಹಳ್ಳಿ, ಜಗದೀಶ್, ಶಶಿ, ಏಸು, ಪೈಂಟರ್ ಜಗದೀಶ್, ಕಾರ್ಪೆಂಟರ್ ಮಹೇಶ್, ಭರತ್, ಕೆ.ಪಿ ಗಿರೀಶ್, ನವೀನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ಸ್ವಚ್ಛ ಮೇವ ಜಯತೆ, ಜಲಾಮೃತ ಹಾಗೂ ನರೇಗ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಪರಿಸರ ದಿನಾಚರಣೆ:
ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ಸ್ವಚ್ಛ ಮೇವ ಜಯತೆ, ಜಲಾಮೃತ ಹಾಗೂ ನರೇಗ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಗ್ರಾಮದ ರುದ್ರಭೂಮಿಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ ಮಂಜಪ್ಪ, ಉಪಾಧ್ಯಕ್ಷ ಎಚ್.ಎಂ ಚಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಪಿ. ಹನುಮಂತಪ್ಪ, ಕಾರ್ಯದರ್ಶಿ ಎಸ್.ಎಂ ಸತೀಶ್, ಸದಸ್ಯರಾದ ಎಚ್.ಎಲ್ ಲಕ್ಷ್ಮೀಪತಿ, ಕೃಷ್ಣಮೂರ್ತಿ, ವನಪಾಲಕ ವೇಣು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಚನ್ನಬಸಪ್ಪ, ಡಿಎಸ್‌ಎಸ್ ಸಂಚಾಲಕ ರಂಗನಾಥ್, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ನರೇಗ ಯೋಜನೆಯಡಿ ಕೆಲಸ ಮಾಡುತ್ತಿರುವ ಉದ್ಯೋಗಾಕಾಂಕ್ಷಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಡಿ.ಇ.ಓ ಬೈರೇಶ್‌ಕುಮಾರ್ ನಿರೂಪಿಸಿದರು.
ಭದ್ರಾವತಿ ತಾಲೂಕಿನ ಸಮೀಪದ ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಬಿಆರ್‌ಪಿ ಸಹಯೋಗದೊಂದಿಗೆ ಪರಿಸರ ದಿನ ಆಚರಿಸಲಾಯಿತು.
ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ:
ತಾಲೂಕಿನ ಸಮೀಪದ ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಬಿಆರ್‌ಪಿ ಸಹಯೋಗದೊಂದಿಗೆ ಪರಿಸರ ದಿನ ಆಚರಿಸಲಾಯಿತು.
ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
No comments:
Post a Comment