ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಭದ್ರಾವತಿ, ಜೂ. ೨೬: ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು, ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಮಂಜೂರಾತಿಯಾದ ರಸ್ತೆ, ಚರಂಡಿ ಕಾಮಗಾರಿಗಳು ಈಗಾಗಲೇ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಪ್ರಗತಿಯಲ್ಲಿವೆ.
ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಗ್ರಾಮಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಜಯರಾಮ್, ಮಂಜು, ಮುಖಂಡರಾದ ಸುದೀಪ್, ಗೋಪಾಲ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment