ಸರ್ಕಾರಿ ಶಾಲೆಗಳ ಆರಂಭಕ್ಕೂ ಮೊದಲು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘದ ವತಿಯಿಂದ ಗುರುವಾರ ಭದ್ರಾವತಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೮: ಸರ್ಕಾರಿ ಶಾಲೆಗಳ ಆರಂಭಕ್ಕೂ ಮೊದಲು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘದ ವತಿಯಿಂದ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯರಿಗೆ ಮನವಿ ಸಲ್ಲಿಸಲಾಯಿತು.
ಶಾಲಾ ಪ್ರಾರಂಭದ ಮುಂಚಿತವಾಗಿ ಎಲ್ಲಾ ಶಾಲೆಗಳಿಗೆ ಸ್ಯಾನಿಟೈಸರ್, ಮಾಸ್ಕ್‌ಗಳು, ಗ್ಲೌಸ್‌ಗಳು, ಥರ್ಮಾ ಟೆಸ್ಟರ್‌ಗಳನ್ನು ವಿತರಿಸುವುದು. ೨೦೨೦-೨೧ನೇ ಸಾಲಿನ ಪಠ್ಯ ಪುಸ್ತಕ, ಸಮವಸ್ತ್ರ, ಶುಚಿ ಪ್ಯಾಡ್‌ಗಳನ್ನು ಆಯಾ ಶಾಲೆಗಳಿಗೆ ಸರಬರಾಜು ಮಾಡುವುದು. ಸಿ.ಆರ್.ಪಿಗಳು ಮಾಹಿತಿಗಳನ್ನು ಶಾಲೆಗಳಿಗೆ ಭೇಟಿ ಮಾಡಿ ಸಂಗ್ರಹಿಸುವುದು ಮತ್ತು ಸ್ಯಾಟ್ಸ್ ಮಾಹಿತಿಗಳನ್ನು ನಿರ್ವಹಿಸುವುದು. ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರುಗಳಿಗೆ ಆಯಾ ಕ್ಲಸ್ಟರ್‌ಗಳ ಸಿ.ಆರ್.ಪಿಗಳು ಶೈಕ್ಷಣಿಕ ವರ್ಷದ ಮಂಜೂರಾದ ವಿವಿಧ ಅನುದಾನಗಳ ಮಾಹಿತಿಯನ್ನು ತಿಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘದ ಅಧ್ಯಕ್ಷ ಕೆ.ಬಿ ಜುಂಜಾನಾಯ್ಕ್, ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಎಸ್. ಉಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment