ಕಾಂಗ್ರೆಸ್ ಪಕ್ಷದ ಯುವ ನಾಯಕ, ಸಂಸದ ರಾಹುಲ್‌ಗಾಂಧಿ ಜನ್ಮ ದಿನವನ್ನು ಶುಕ್ರವಾರ ಕಾಗದನಗರದ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಜೂ. ೧೯: ಕಾಂಗ್ರೆಸ್ ಪಕ್ಷದ ಯುವ ನಾಯಕ, ಸಂಸದ ರಾಹುಲ್‌ಗಾಂಧಿ ಜನ್ಮ ದಿನವನ್ನು ಶುಕ್ರವಾರ ಕಾಗದನಗರದ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.
ಕೊರೋನಾ ಮಹಾಮಾರಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಬರುವ ಮೂಲಕ ರಾಹುಲ್‌ಗಾಂಧಿ ಜನ್ಮ ದಿನವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ವಿಶೇಷವಾಗಿ ಆಚರಿಸಿ ಹಿರಿಯ ನಾಗರಿಕರ ಆರೈಕೆ ಕೇಂದ್ರಕ್ಕೆ ಹಣ್ಣು ಹಾಗೂ ಅಗತ್ಯವಿರುವ ದಿನಸಿ ಸಾಮಗ್ರಿ ವಿತರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಉಪಾಧ್ಯಕ್ಷೆ ಮಂಜುಳ ರಾಮಚಂದ್ರ, ಎಸ್‌ಸಿ ವಿಭಾಗದ ರಾಜ್ಯ ಸಂಚಾಲಕ ಬಿ.ಪಿ ರಾಘವೇಂದ್ರ, ತಾಲೂಕು ಅಧ್ಯಕ್ಷ ಅಧ್ಯಕ್ಷ ಅರುಣ್, ಉಪಾಧ್ಯಕ್ಷ ಮಹೇಶ್, ಯುವ ಘಟಕದ ಅಧ್ಯಕ್ಷ ವಿನೋದ್‌ಕುಮಾರ್, ಮುಖಂಡರಾದ ಜಯರಾಜ್, ಬಿ.ಟಿ ನಾಗರಾಜ್, ಪ್ರಾನ್ಸಿಸ್, ಮುಕುಂದಪ್ಪ, ಪ್ರಕಾಶ್‌ರಾವ್, ವಿಲ್ಸನ್, ಅಣ್ಣೋಜಿರಾವ್, ರಘು, ರೂಪನಾರಾಯಣ್ ಹಾಗೂ ಆರೈಕೆ ಕೇಂದ್ರದ ಮೇಲ್ವಿಚಾರಕಿ ಸವಿತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment