ಭದ್ರಾವತಿ, ಜೂ. ೨೩: ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ರೋಟರಿ ಕ್ಲಬ್‌ಗೆ ಜೂ.೨೪ರಂದು ಜಿಲ್ಲಾ ಗವರ್ನರ್ ಬಿ.ಎನ್ ರಮೇಶ್ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ.
ತಾಲೂಕಿನ ಕೋಮಾರನಹಳ್ಳಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಾಗೂ ನಗರದ ರಂಗಪ್ಪ ವೃತ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಹಾಯಕ ಜಿಲ್ಲಾ ಗವರ್ನರ್ ಮುರುಳಿ ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರೋಟರಿ ಕಾರ್ಯದರ್ಶಿ ಅಡವೀಶಯ್ಯ ಕೋರಿದ್ದಾರೆ.
No comments:
Post a Comment