ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೩೦: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು.ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಮತ್ತು ಗೌರವ ಧನ ಎರಡೂ ಸೇರಿ ಮಾಸಿಕ ೧೨ ಸಾವಿರ ರು. ನೀಡುವುದು. ಆಗಾಗ ಎಲ್ಲಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಿ ಕೊರೋನಾ ವೈರಸ್ ಪ್ರಕರಣ ಕಂಡು ಬಂದಲ್ಲಿ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡುವುದು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವ ಧನ ನೀಡುವುದು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈಗಾಗಲೇ ಈ ಸಂಬಂಧ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೂ ಸಹ ಯಾವುದೇ ಬೇಡಿಕೆ ಈಡೇರಿಲ್ಲ. ಈ ಹಿನ್ನಲೆಯಲ್ಲಿ ೭ ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ರೀತಿಯ ಪ್ರತಿಭಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಒಂದು ವೇಳೆ ಸಮಸ್ಯೆ ಪರಿಹರಿಸದಿದ್ದಲ್ಲಿ ಜು.೧೦ರಿಂದ ರಾಜ್ಯಾದ್ಯಂತ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಲಾಗಿದೆ.
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಆಶಾ, ಆರ್. ವಾಸಂತಿ, ಎನ್. ಭಾಗ್ಯ, ಎಚ್. ನೇತ್ರಾವತಿ, ಎನ್. ಕಮಲ, ಪಿ. ಶೃತಿ, ಎನ್. ಸೀಮಾ, ಎಸ್. ಗೀತಾಂಜಲಿ, ಹೇಮಾವತಿ, ಆರ್. ಮಂಜುಳ, ಸುಮಿತ್ರ ಬಾಯಿ, ಫಜಲುನ್ನಿಸಾ, ಎಸ್. ಮಮತ, ವಿ. ಅನಿತಾ, ಬಿ. ದೀಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment