ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಶಾಖಾ ಮಠ ಭದ್ರಾವತಿ ತಾಲೂಕಿನ ಬಿಳಕಿ ಹಿರೇಮಠದಲ್ಲಿ ಮುಖ್ಯಮಂತ್ರಿಗಳ ಅನುದಾನದಲ್ಲಿ ಬಿಡುಗಡೆಯಾದ ೫೦ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನಕ್ಕೆ ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು. ಶ್ರೀ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಭದ್ರಾವತಿ, ಜೂ. ೧೩: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಶಾಖಾ ಮಠ ತಾಲೂಕಿನ ಬಿಳಕಿ ಹಿರೇಮಠ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಅನುದಾನದಲ್ಲಿ ಬಿಡುಗಡೆಯಾದ ೫೦ ಲಕ್ಷ ರು. ವೆಚ್ಚದಲ್ಲಿ ಮಠದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿದೆ.
ಸಮುದಾಯ ಭವನ ನಿರ್ಮಾಣಕ್ಕೆ ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು. ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಶಿವಮೊಗ್ಗ ಬಸವೇಶ್ವರ ಸಹಕಾರ ಸಂಘದ ನಿದೆ೯ಶಕ ಬಿ.ಪಿ ಮರುಳೇಶ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ನಿರ್ಮಿತಿ ಕೇಂದ್ರದ ಇಂಜಿನಿಯರ್ ಜಿತೇಂದ್ರ, ಸಿವಿಲ್ ಇಂಜಿನಿಯರ್ ಮಂಜುನಾಥ್, ಮಠದ ವ್ಯವಸ್ಥಾಪಕ ಚಿದಾನಂದ ಸ್ವಾಮಿ, ಬಿ.ಪಿ ಚಂದ್ರಶೇಖರಪ್ಪ, ಜಿ.ಎಸ್ ಸುರೇಶಯ್ಯ, ಎಚ್. ಮಂಜುನಾಥ್, ಆನಂದ ಸ್ವಾಮಿ, ಕೆ.ಆರ್ ಆನಂದ್, ಬಿ.ಎಂ. ರಮೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
No comments:
Post a Comment