ಭದ್ರಾವತಿ ತಾಲೂಕಿನಲ್ಲಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳಿಗೆ ಮಹಾಮಾರಿ ಕೊರೋನಾ ವೈರಸ್ ತಪಾಸಣೆ ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ಸಯುಕ್ತ ಜನತಾದಳ ರಾಜ್ಯ ಮುಖಂಡ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್ ಶಿವಕುಮಾರ್‌ಗೆ ಮನವಿ ಸಲ್ಲಿಸಿದರು.
ಭದ್ರಾವತಿ, ಜು. ೧೪: ತಾಲೂಕಿನಲ್ಲಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳಿಗೆ ಮಹಾಮಾರಿ ಕೊರೋನಾ ವೈರಸ್ ತಪಾಸಣೆ ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ಸಯುಕ್ತ ಜನತಾದಳ ರಾಜ್ಯ ಮುಖಂಡ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್ ಶಿವಕುಮಾರ್‌ಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಸಾಗರ ತಾಲೂಕಿನ ರಿಬ್ಬನ್‌ಪೇಟೆ ಬಿಎಸ್‌ಎಸ್ ಮೈಕ್ರೋ ಫೈನಾನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೨೬ ವರ್ಷದ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ಹರಡಿರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಮುನ್ನಚ್ಚರಿಕೆ ವಹಿಸುವ ಅಗತ್ಯವಿದೆ. ತಾಲೂಕಿನಲ್ಲಿರುವ ಲೀಡ್ ಬ್ಯಾಂಕ್ ವ್ಯಾಪ್ತಿಗೆ ಒಳಪಡುವ ಸಣ್ಣ ಬ್ಯಾಂಕ್‌ಗಳು ಹಾಗೂ ಚಿನ್ನದ ಮೇಲೆ ಸಾಲ ನೀಡುವ ಮುತ್ತೂಟ್, ಐಐಎಫ್‌ಎಲ್, ಮಣಪುರಂ ಹಾಗೂ ಉಜ್ಜೀವನ್, ಬಿಎಸ್‌ಎಸ್, ಎಸ್‌ಕೆಎಸ್, ನಿರಂತರ, ಗ್ರಾಮೀಣ ಕೂಟ, ಗ್ರಾಮ ಶಕ್ತಿ, ಸ್ಪಂದನ, ಬೆಲ್‌ಸ್ಟಾರ್ ಸೇರಿದಂತೆ ಎಲ್ಲಾ ಮೈಕ್ರೋ ಫೈನಾನ್ಸ್‌ಗಳ ಸಿಬ್ಬಂದಿಗಳಿಗೆ ಕೊರೋನಾ ವೈರಸ್ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಬೇಕೆಂದು ಆಗ್ರಹಿಸಿದರು.
ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ಆಗಸ್ಟ್ ತಿಂಗಳ ವರೆಗೆ ಯಾವುದೇ ಕಾರಣಕ್ಕೂ ಬಲವಂತವಾಗಿ ಸಾಲ ವಸೂಲಾತಿ ಮಾಡುವುದಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳು ಭರವಸೆ ನೀಡಿದ್ದವು. ಆದರೂ ಸಹ ತಾಲೂಕಿನಲ್ಲಿ ಸಾಲ ವಸೂಲಾತಿ ಮಾಡಲಾಗುತ್ತಿದೆ. ತಾಲೂಕಿನ ಹಲವೆಡೆ ಈಗಾಗಲೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಸೀಲ್‌ಡೌನ್ ಮಾಡಲಾಗಿದೆ. ಈ ಪರಿಸ್ಥಿತಿಯಲ್ಲಿ ಸಾಲ ವಸೂಲಾತಿ ಮಾಡುವುದು ಸರಿಯಲ್ಲ. ಇದರಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಜೊತೆಗೆ ಕಡ್ಡಾಯವಾಗಿ ತಪಾಸಣೆ ನಡೆಸುವಂತೆ ಸೂಚಿಸಬೇಕು. ಇಲ್ಲವಾದಲ್ಲಿ ಜು.೨೦ರಿಂದ ಪಕ್ಷದ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ವಾಟಾಳ್ ರಮೇಶ್, ಮಂಜುನಾಥ್ ಮತ್ತು ಪುಷ್ಪರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment