ಭದ್ರಾವತಿ ನಗರಸಭೆ ವ್ಯಾಪ್ತಿಯ ೬ನೇ ವಾರ್ಡಿನಲ್ಲಿ ಕನ್ಸರ್ವೆನ್ಸಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬುಧವಾರ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೧೫: ನಗರಸಭೆ ವ್ಯಾಪ್ತಿಯ ೬ನೇ ವಾರ್ಡಿನಲ್ಲಿ ಕನ್ಸರ್ವೆನ್ಸಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬುಧವಾರ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
ನಗರಸಭೆಗೆ ಸೇರಿದ ಸಾರ್ವಜನಿಕರ ಉಪಯೋಗಕ್ಕೆ ಇರುವ ಕನ್ಸರ್ವೆನ್ಸಿ ಜಾಗದಲ್ಲಿ ಹಳೇನಗರ ಹನುಮಂತಪ್ಪ ಕಾಲೋನಿ ನಿವಾಸಿ ಚಂದ್ರಮ್ಮ ಎಂಬುವರು ಕಾನೂನು ಬಾಹಿರವಾಗಿ ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅಲ್ಲದೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಿಗೆ ಸಹ ತೆಗೆದುಕೊಂಡಿರುವುದಿಲ್ಲ. ಈ ನಡುವೆ ಮನೆಯ ಎರಡು ನಲ್ಲಿ ಸಂಪರ್ಕಗಳನ್ನು ಅಕ್ರಮವಾಗಿ ಪಡೆದುಕೊಂಡಿರುತ್ತಾರೆ. ನಿವೇಶನ ಅಳತೆಯಲ್ಲೂ ಸಾಕಷ್ಟು ವ್ಯತ್ಯಾಸಗಳಿದ್ದು, ಈ ಹಿನ್ನಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಕನ್ಸರ್ವೆನ್ಸಿ ಜಾಗ ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
ಕರ್ನಾಟಕ ಜನ ಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ತಾಲೂಕು ಅಧ್ಯಕ್ಷ ಕೆ. ಮಂಜುನಾಥ್, ಮುಖಂಡರಾದ ರಾಘವೇಂದ್ರ, ಗಣಪತಿರಾವ್, ಯಶೋಧ, ದೊಡ್ಮನೆ ನಾರಾಯಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment