ಕುಮಾರ್
ಭದ್ರಾವತಿ, ಜು. ೧೫: ಕರ್ತವ್ಯದಲ್ಲಿ ತೊಡಗಿದ್ದ ನಗರದ ನ್ಯೂಟೌನ್ ಈಶ್ವರಮ್ಮ ಪ್ರೌಢಶಾಲೆ ಶಿಕ್ಷಕ ಕುಮಾರ್(೪೮) ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಜನ್ನಾಪುರ ನಿವಾಸಿಯಾಗಿದ್ದು, ಪತ್ನಿ, ಓರ್ವ ಪುತ್ರಿ ಸೇರಿ ಅಪಾರ ಬಂಧು-ಬಳಗ ಬಿಟ್ಟಗಲಿದ್ದಾರೆ. ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಮೌಲ್ಯಮಾಪನ ನಡೆಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದೆ. ಮೃತರ ತಂದೆ ನಾಗರಾಜ್ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೃತರ ನಿಧನಕ್ಕೆ ಶ್ರಿ ಸತ್ಯಸಾಯಿ ಬಾಬಾ ಸಮಗ್ರ ಶಿಕ್ಷಣ ಸಂಸ್ಥೆ, ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಕನ್ನಡ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಸೇರಿದಂತೆ ಶಿಕ್ಷಕ ವೃಂದದವರು ಸಂತಾಪ ಸೂಚಿಸಿದ್ದಾರೆ.
No comments:
Post a Comment