ಭದ್ರಾವತಿ, ಜು. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ೧೭ ಪ್ರಕರಣಗಳು ದಾಖಲಾಗಿವೆ.
ಉಜ್ಜನಿಪುರದಲ್ಲಿ ೬೫ ವರ್ಷದ ಮಹಿಳೆ ಮತ್ತು ೩೪ ವರ್ಷದ ಪುರುಷ, ಹಳೇನಗರ ಮರಾಠ ಬೀದಿಯಲ್ಲಿ ೬೨ ವರ್ಷದ ವ್ಯಕ್ತಿ ಮತ್ತು ೫೫ ವರ್ಷದ ಮಹಿಳೆ, ಬೊಮ್ಮನಕಟ್ಟೆಯಲ್ಲಿ ೪೫ ವರ್ಷದ ವ್ಯಕ್ತಿ, ಹುತ್ತಾ ಕಾಲೋನಿ ೩೭ ವರ್ಷದ ಪುರುಷ, ಅಂಬೇಡ್ಕರ್ ನಗರದಲ್ಲಿ ೪೪ ವರ್ಷದ ವ್ಯಕ್ತಿ, ಗಾಂಧಿನಗರದಲ್ಲಿ ೫೫ ವರ್ಷದ ಮಹಿಳೆ, ಜೈ ಭೀಮ ನಗರದಲ್ಲಿ ೫೭ ವರ್ಷದ ಮಹಿಳೆ, ಸೀಗೆಬಾಗಿಯಲ್ಲಿ ೪೧ ವರ್ಷದ ಪುರುಷ, ಹೊಳೆ ನೇರಳೆಕೆರೆ ೬೫ ವರ್ಷದ ವ್ಯಕ್ತಿ, ದೊಣಬಘಟ್ಟ ತಡಸದಲ್ಲಿ ೪೨ ವರ್ಷದ ಮಹಿಳೆ, ಹೊಳೆಹೊನ್ನೂರಿನಲ್ಲಿ ೨೪ ವರ್ಷದ ಯುವತಿ, ಬಿಆರ್’ಪಿ ಗ್ಯಾರೇಜ್ ಕ್ಯಾಂಪ್’ನಲ್ಲಿ 25 ಹಾಗೂ 65 ವರ್ಷದ ಇಬ್ಬರು ಪುರುಷರು ಮತ್ತು ಹುಣಸೆ ಕಟ್ಟಿ ಜಂಕ್ಷನ್’ನಲ್ಲಿ 26 ವರ್ಷದ ಯುವಕ ಒಟ್ಟು ೧೭ ಮಂದಿ ಸೋಂಕಿಗೆ ಒಳಗಾಗಿದ್ದಾರೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.
No comments:
Post a Comment