ಭದ್ರಾವತಿಯಲ್ಲಿ ಕೆಪಿಟಿಸಿಎಲ್ ನೌಕರರ ಸಹಕಾರ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆರಿಗೆ ಆರ್ಥಿಕ ನೆರವು ನೀಡಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೧೬: ನಗರದ ಕೆಪಿಟಿಸಿಎಲ್ ನೌಕರರ ಸಹಕಾರ ಸಂಘದ ವತಿಯಿಂದ ಗುರುವಾರ ಕೊರೋನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆರಿಗೆ ಆರ್ಥಿಕ ನೆರವು ನೀಡಿ ಅಭಿನಂದಿಸಲಾಯಿತು.
ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮಾಜದ ಎಲ್ಲರೂ ಮತ್ತಷ್ಟು ಚೈತನ್ಯ ತುಂಬುವ ನಿಟ್ಟಿನಲ್ಲಿ ಮುಂದಾಗಬೇಕೆಂಬ ಉದ್ದೇಶದೊಂದಿಗೆ ಆರ್ಥಿಕ ನೆರವು ನೀಡಿ ಅಭಿನಂದಿಸಲಾಯಿತು.
ಆಶಾ ಕಾರ್ಯಕರ್ತೆಯರಾದ ಶೃತಿ, ನಾಗರತ್ನ ಭಾಯಿ ಮತ್ತು ಯಶಸ್ವಿನಿ ಸೇರಿ ೩ ಮಂದಿಗೆ ತಲಾ ೩ ಸಾವಿರ ರು. ಆರ್ಥಿಕ ನೆರವು ಅಭಿನಂದಿಸಲಾಯಿತು.
ಕಾರ್ಯದರ್ಶಿ ಲೋಕೇಶ್, ಸಿಬ್ಬಂದಿಗಳಾದ ಶಂಕರನಾರಾಯಣ, ಹನುಮಂತಪ್ಪ, ದೇವರಾಜ್ ಮತ್ತು ರಮೇಶ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment