ಭದ್ರಾವತಿಯಲ್ಲಿ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ಹುತ್ತಾ ಮಹಾ ಶಕ್ತಿ ಕೇಂದ್ರದವತಿಯಿಂದ ಮಂಗಳವಾರ ಹಿಂದೂ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಭದ್ರಾವತಿ, ಜು. ೨೯: ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ನಗರದ ಹುತ್ತಾ ಮಹಾ ಶಕ್ತಿ ಕೇಂದ್ರದವತಿಯಿಂದ ಮಂಗಳವಾರ ಹಿಂದೂ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಎಂಪಿಎಂ ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಕವಲಗುಂದಿ ರಾಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಚನ್ನೇಶ್, ಮುಖಂಡರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ಕೆ.ಆರ್ ಸತೀಶ್, ಮೂರ್ತಿ, ಸತೀಶ್‌ಕುಮಾರ್, ಅನ್ನಪೂರ್ಣ ಸಾವಂತ್, ಶೋಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment