ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆ ಪರಿಶೀಲನೆ
ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಜ್ಯ ಸಂಘಟನಾ ಪ್ರಮುಖರಾದ ಪ್ರವೀಣ್‌ವಾಲ್ಕೆ ಭದ್ರಾವತಿ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.
ಭದ್ರಾವತಿ, ಜು. ೩೧: ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಜ್ಯ ಸಂಘಟನಾ ಪ್ರಮುಖರಾದ ಪ್ರವೀಣ್‌ವಾಲ್ಕೆ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.
ಹೊಸಮನೆ ಓಂ ಹಿಂದು ಕೋಟೆ ರಾಮಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಸೂಚಿಸಿದರು.
ಜಿಲ್ಲಾಧ್ಯಕ್ಷ ಬಿ.ವಿ. ಚಂದನ್ ರಾವ್, ಜಿಲ್ಲಾ ಗೋರಕ್ಷಾ ಪ್ರಮುಖ್ ಚರಣ್ ದೇವಾಂಗ, ಜಿಲ್ಲಾ ಮಾಧ್ಯಮ ಪ್ರಮುಖ್ ಲತೇಶ್ ಶೆಟ್ಟಿ, ಶಿವಮೊಗ್ಗ ತಾಲೂಕು ಅಧ್ಯಕ್ಷ ಕಿರಣ್ ಗೌಡ, ಭದ್ರಾವತಿ ತಾಲೂಕು ಅಧ್ಯಕ್ಷ ಮನು ಗೌಡ, ಗ್ರಾಮಾಂತರ ಅಧ್ಯಕ್ಷ ನವೀನ್ ಕುಮಾರ್ ಹಾಗೂ ಇನ್ನಿತರರಿಗೆ ಜವಾಬ್ದಾರಿಗಳನ್ನು ಘೋಷಿಸಿದರು.
ಓಂ ಹಿಂದೂ ಕೋಟೆ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಯೋಗೇಶ್, ರಂಗನಾಥ, ಟೀ ಗೋಪಾಲ, ಪರಶುರಾಮ್ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
No comments:
Post a Comment