ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ೨ ಅಲೆಮನೆಗಳ ಮೇಲೆ ತಹಸೀಲ್ದಾರ್ ಶಿವಕುಮಾರ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿರುವುದು.
ಭದ್ರಾವತಿ, ಜು. ೨೮: ತಾಲೂಕಿನ ಅರಳಿಹಳ್ಳಿ ಗ್ರಾಮದ ೨ ಅಲೆಮನೆಗಳ ಮೇಲೆ ತಹಸೀಲ್ದಾರ್ ಶಿವಕುಮಾರ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿರುವ ಘಟನೆ ನಡೆದಿದೆ.
ಕಳಪೆ ಗುಣಮಟ್ಟದ ಸಕ್ಕರೆ ಹಾಗೂ ಇನ್ನಿತರ ರಾಸಾಯನಿಕ ಪದಾರ್ಥಗಳನ್ನು ಬಳಸಿ ಬೆಲ್ಲ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರ ಮೇರೆಗೆ ಅನುಸೂಯಮ್ಮ ಮತ್ತು ಬಿ. ರಾಜು ಎಂಬುವರಿಗೆ ಸೇರಿದ ೨ ಆಲೆಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ಸಂದರ್ಭದಲ್ಲಿ ಸುಮಾರು ೧೫೦ ಸಕ್ಕರೆ ಚೀಲ ಹಾಗೂ ಬೆಲ್ಲ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ಪದಾರ್ಥಗಳು ಪತ್ತೆಯಾಗಿವೆ. ೨ ಆಲೆಮನೆಗಳನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತಪಾಸಣೆ ಕೈಗೊಳ್ಳಲಾಗುತ್ತಿದೆ.
ಕಾರ್ಯಾಚರಣೆ ತಂಡದಲ್ಲಿ ಶಿರಸ್ತೇದಾರ್ ಮಂಜಾನಾಯ್ಕ, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ್, ರಾಜಸ್ವ ನಿರೀಕ್ಷಕ ಜಗದೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment